HomeFresh Newsಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ 100 ನಾಟೌಟ್ ಪ್ರತಿಭಟನೆಯು ನಗರದ ಕೆಪಿಟಿ ಪೆಟ್ರೋಲ್ ಬಂಕ್ ಎದುರು ನಡೆಯಿತು.

100 ನಾಟೌಟ್’ ಎಂಬ ಹೆಸರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಾಗಟೆ ಬಾರಿಸುವ ಮೂಲಕ ಇಂಧನ ತೈಲ ಬೆಲೆ ಏರಿಕೆಯನ್ನು ಖಂಡಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಬ್ಯಾರೆಲ್ ಗೆ 140 ಡಾಲರ್ ಇದ್ದಾಗಲೂ ಮೇಲಿದ್ದರೂ 70 ವರ್ಷದಲ್ಲಿ ಪೆಟ್ರೋಲ್ ಗೆ 70 ರೂ. ಏರಿಕೆಯಾಗದಂತೆ ಕಾಂಗ್ರೆಸ್ ನೋಡಿಕೊಂಡಿತ್ತು.  ಕೊರೋನ ಸಂದರ್ಭದಲ್ಲಿ ಜನ ಸಾಮಾನ್ಯರು ಬದುಕಬೇಕಾದರೆ ಇಂಧನ ಬೆಲೆ ಕಡಿಮೆಯಾಗಬೇಕು. ಅಗ ಅಗತ್ಯ ವಸ್ತುಗಳ ಬೆಲೆ ಏರಿಕೆಯೂ ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಿದರು.

 ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ,ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡ ಮಿಥುನ್ ರೈ,ಮಾಜಿ ಶಾಸಕರಾದ ಮೊಯ್ದಿನ್ ಬಾವ, ಜೆ. ಆರ್.ಲೋಬೊ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಇಂಧನ ಬೆಲೆ ಏರಿಕೆ ವಿರುದ್ಧ ಭಿತ್ತಿ ಫಲಕಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಶಶಿಧರ್ ಹೆಗ್ಡೆ, ಸದಾಶಿವ ಉಳ್ಳಾಲ್, ಪಿ‌.ವಿ.ಮೋಹನ್,  ವಿನಯ್ ರಾಜ್, ಪ್ರತಿಭಾ ಕುಳಾಯಿ, ಭಾಸ್ಕರ ಕೆ., ಅಪ್ಪಿ, ನವೀನ್ ಡಿಸೋಜ, ಟಿ.ಕೆ.ಸುಧೀರ್, ಶಬೀರ್,  ಸವಾದ್ ಸುಳ್ಯ, ವಿಶ್ವಾಸ್ ಕುಮಾರ್ ದಾಸ್, ವಿವೇಕ್ ರಾಜ್, ಸಂಶುದ್ದೀನ್ ಮೊದಲಾದವರು ಭಾಗವಹಿಸಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments