ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಂತಹ ಅಭ್ಯರ್ಥಿ : ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ
ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಮತದಾರರಿಗೆ ಹಾಗೂ ಖರ್ಚಿಗೆ ಒಂದೇ ಒಂದು ರೂಪಾಯಿ ಖರ್ಚು ಮಾಡಿದೇ ಗೆದ್ದಂತಹ ಅಭ್ಯರ್ಥಿ ಅಂದರೆ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಎಂದು ಹೇಳಲು ಸಂತೋಷಪಡುತ್ತೇನೆ. ಇದು ನೈಜ ಮತದಾರರ ಗೆಲುವು ಅಂತ ನನಗೆ ಅನಿಸುತ್ತೆ. ಮತ್ತು ಇದು ಬಿಜೆಪಿ ಪಕ್ಷದ ಪ್ರತಿ ಕಾರ್ಯಕರ್ತರ ಶ್ರಮದ ಫಲ ಎಂದು ನಾನು ಭಾವಿಸುತ್ತೇನೆ. ಎರಡು ಜಿಲ್ಲೆಗಳ ಬಿಜೆಪಿ ಜಿಲ್ಲಾಧ್ಯಕ್ಷರು ಸಂಸದರಿಗೆ ಹಾಗೂ ಸಿಎಂ ಹಾಗೂ ಕಾರ್ಯಕರ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಸಂತೋಷ ವ್ಯಕ್ತಪಡಿಸಿದರು. ಪಂಚಾಯತ್ ರಾಜ್ ಇಲಾಖೆಯ ಸಬಲೀಕರಣಕ್ಕಾಗಿ ನಾನು ದುಡಿಯುತ್ತೀನಿ ಎಂದು ಹೇಳಿದರು.

















