Homeಕರಾವಳಿಉಡುಪಿಉಡುಪಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಜೆಡಿಎಸ್‌ನಿಂದ ಪ್ರತಿಭಟನೆ

ಉಡುಪಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಜೆಡಿಎಸ್‌ನಿಂದ ಪ್ರತಿಭಟನೆ

ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರದ ಲಾಕ್ ಡೌನ್ ಘೋಷಿಸಿದ್ದರಿಂದ ಜನ ಸಾಮಾನ್ಯರು ಕೆಲಸ ಕಾರ್ಯಗಳಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಗ್ಯಾಸ್, ಪೆಟ್ರೋಲ್, ಡಿಸೇಲ್, ವಿದ್ಯುತ್ ಹಾಗೂ ನಿತ್ಯ ಉಪಯೋಗಿ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಜೆ.ಡಿ.ಎಸ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಯವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜನತಾದಳದ ಜಿಲ್ಲಾಧ್ಯಕ್ಷ ಯೋಗಿಸ್ ಶೆಟ್ಟಿ ಯವರು, ಅಗತ್ಯದ ವಸ್ತುಗಳ ಬೆಲೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನಸಾಮಾನ್ಯರಿಗೆ ಬದುಕಲು ಸಾಧ್ಯವಿಲ್ಲದಂತಾಗಿದೆ. ಈ ಕೂಡಲೆ ಬೆಲೆ ಕಡಿಮೆ ಮಾಡಿ ಜನಸಾಮಾನ್ಯರು ಬದುಕಲು ಅವಕಾಶ ಮಾಡಿ ಇಲ್ಲವೇ ರಾಜಿನಾಮೆ ನೀಡಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಈ ಪ್ರತಿಭಟನೆಯಲ್ಲಿ ಅಲ್ಪ ಸಂಖ್ಯಾತರ ಅಧ್ಯಕ್ಷ ಮನ್ಸೂರ್ ಇಬ್ರಾಹಿಂ, ಕುಂದಾಪುರ ಕಾರ್ಯಾಧ್ಯಕ್ಷ ಹುಸೇನ್ ಹೈಕಾಡಿ, ಇಕ್ಬಾಲ್ ಉಡುಪಿ, ಜಯರಾಂ ಆಚಾರಿ,ಬಾಲಕ್ರಷ್ಣ , ರಮೇಶ್ ಕುಂದಾಪುರ ಹಾಗೂ ಕುಂದಾಪುರ ಮತ್ತು ಬೈಂದೂರಿನ ಜೆ.ಡಿ.ಎಸ್ ಮುಖಂಡರು ಭಾಗವಹಿಸಿದ್ದರು.
ವರದಿ: ರವಿರಾಜ್ ಕುಂದಾಪುರ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments