HomeFresh Newsಉದಯ ಗಾಣಿಗ ಕೊಲೆ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರಿಂದ ಯತ್ನ:  ಗೋಪಾಲ ಪೂಜಾರಿ ಆರೋಪ

ಉದಯ ಗಾಣಿಗ ಕೊಲೆ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರಿಂದ ಯತ್ನ:  ಗೋಪಾಲ ಪೂಜಾರಿ ಆರೋಪ

ಯಡಮೊಗೆ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದು ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಆರೋಪಿಸಿದ್ದಾರೆ.

ಕಾಪುವಿನಲ್ಲಿ ಅವರು ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿದರು. “ಈ ಕೊಲೆಯ ಕುರಿತು ವಿಸ್ತ್ರತ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯವರನ್ನು ಒತ್ತಾಯಿಸಲಾಗಿದೆ ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಮ್ಮ ಪ್ರಯತ್ನ ಮುಂದುವರಿಯಲಿವೆ” ಎಂದರು.

ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಮುಖ್ಯ ಆರೋಪಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್ ನನ್ನು ರಕ್ಷಿಸಲು ಬಿಜೆಪಿ ಜಿಲ್ಲಾ ಮುಖಂಡರು ಪ್ರಯತ್ನಿಸುತ್ತಿದ್ದಾರೆಂಬ ಗಂಭೀರ ಆರೋಪಗಳಿವೆ. ಈ ಬಗ್ಗೆಯೂ ಎಸ್ಪಿಯವರಿಗೆ ನೀಡಿರುವ ಮನವಿಯಲ್ಲಿ ವಿನಂತಿಸಲಾಗಿದೆ” ಎಂದು ಗೋಪಾಲ ಪೂಜಾರಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments