HomeUncategorizedಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ : ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ಪ್ರತಿಭಟನೆ

ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ : ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ಪ್ರತಿಭಟನೆ

ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಅವರು, ನಿರುದ್ಯೋಗಿಗಳ ಪ್ರಮಾಣ ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿದೆ. ನಿರುದ್ಯೋಗದ ಪ್ರಮಾಣ ಸ್ವತಂತ್ರ ಭಾರತ ಯಾವತ್ತೂ ಕಂಡಿರದ ಮಟ್ಟಕ್ಕೆ ಏರಿಕೆಯಾಗಿದೆ.ಎಲ್ಲೆಲ್ಲೊ ಹತಾಶ ನಿರುದ್ಯೋಗಿಗಳ ದಂಡೇ ಕಂಡುಬರುತ್ತಿದೆ. ಸರ್ಕಾರದ ನೀತಿಗಳು ಉದ್ಯೋಗ ನಷ್ಟಕ್ಕೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಡಿವೈಎಫ್‍ಐ ನಗರ ಅಧ್ಯಕ್ಷ ನವೀನ್ ಕೊಂಚಾಡಿ, ಡಿಹೆಚ್‍ಎಸ್ ಜಿಲ್ಲಾಧ್ಯಕ್ಷ ತಿಮ್ಮಯ್ಯ ಕೊಂಚಾಡಿ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments