HomeFresh Newsಕಡಬದಲ್ಲಿ ಕಾಡಾನೆ ಹಾವಳಿ: ಕೃಷಿ ತೋಟಗಳಿಗೆ ಹಾನಿ

ಕಡಬದಲ್ಲಿ ಕಾಡಾನೆ ಹಾವಳಿ: ಕೃಷಿ ತೋಟಗಳಿಗೆ ಹಾನಿ

ಕಡಬ: ಕೊಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ಕಾಡಂಚಿನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಕೃಷಿ ತೋಟಗಳಿಗೆ ದಾಳಿಮಾಡಿ ಹಾನಿಯುಂಟು ಮಾಡುತ್ತಿವೆ.

ಕೃಷಿ ತೋಟಗಳಲ್ಲಿ ಕಾಡಾನೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಪಿಲಿಕಜೆ ಎಂಬಲ್ಲಿ ಪಿ.ಸಿ.ಸುಂದರ ಗೌಡ ಎಂಬುವರ ತೋಟಕ್ಕೆ ಲಗ್ಗೆಯಿಟ್ಟ ಆನೆ ಅಡಕೆ, ತೆಂಗು, ಕೊಕ್ಕೋ, ಬಾಳೆ ಮೊದಲಾದ ಕೃಷಿಯನ್ನು ನಾಶಪಡಿಸಿದೆ.
ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments