HomeFresh Newsಕಡಬ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು

ಕಡಬ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು

ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ.

ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೆರೆಗೆ ತಾವರೆ ಹೂವಿನ ಗಿಡ ಬಿಡಲು ಹೋಗುವುದಾಗಿ ಹೇಳಿಹೋಗಿದ್ದ ಶ್ರೇಯಾ ಹಿಂತಿರುಗಿ ಬರದೇ ಇದ್ದ ಹಿನ್ನೆಲೆಯಲ್ಲಿ ಮನೆಯವರು ಕೆರೆಯ ಕಡೆ ಹೋಗಿದ್ದ ವೇಳೆ ಶ್ರೇಯಾ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments