HomeFresh Newsಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ‌ ದಿನಾಚರಣೆ:ಪತ್ರಿಕಾ ವಿತರಕ ಬಾಲಕೃಷ್ಣ ರೈ ಗೆ ಸನ್ಮಾನ

ಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ‌ ದಿನಾಚರಣೆ:ಪತ್ರಿಕಾ ವಿತರಕ ಬಾಲಕೃಷ್ಣ ರೈ ಗೆ ಸನ್ಮಾನ

ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು.

ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿನ ಸೇವೆಗಾಗಿ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜೇಸಿಐ ಕಡಬ ಕದಂಬ ಘಟಕದ ಪೂರ್ವ ವಲಯಾಧಿಕಾರಿ ಅಶೋಕ್ ಕುಮಾರ್, ಪೂರ್ವಾಧ್ಯಕ್ಷ ಫಯಾಝ್ ಕಡಬ, ಪತ್ರಕರ್ತರ ಸಂಘದ ಕಾರ್ಯದರ್ಶಿ ವಿಜಯ ಕುಮಾರ್, ಸ್ಥಾಪಕಾಧ್ಯಕ್ಷ ಕೆ.ಎಸ್. ಬಾಲಕೃಷ್ಣ ಕೊಯಿಲ,ಪತ್ರಕರ್ತರಾದ V4 ನ್ಯೂಸ್ ದಿವಾಕರ ಯಂ,  ಗಣೇಶ್ ಇಡಲಾ, ಶಿವ ಭಟ್,  ಅನಿಶ್ ,  ಪ್ರಕಾಶ್ ಕೊಡಿoಬಾಳ ವಿವಿಧ ಪದಾಧಿಕಾರಿಗಳು, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಕಡಬ ಘಟಕದ ಅಧ್ಯಕ್ಷ ವಿ. ಕೆ ಕಡಬ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments