HomeFresh Newsಕಡಬ: ಬೈಕ್ ಗೆ ಕಾರು ಢಿಕ್ಕಿ : ಸವಾರನಿಗೆ ಗಂಭೀರ ಗಾಯ

ಕಡಬ: ಬೈಕ್ ಗೆ ಕಾರು ಢಿಕ್ಕಿ : ಸವಾರನಿಗೆ ಗಂಭೀರ ಗಾಯ

ಕಡಬ: ಬೈಕಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ  ನಡೆದಿದೆ.

ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60 )ಗಾಯಗೊಂಡವರು. ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments