ಇಂದಿನಿಂದ ರಾಜ್ಯದಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ

ಕೇರಳ ರಾಜ್ಯದ 441 ವಿದ್ಯಾರ್ಥಿಗಳು ಸೇರಿದಂತೆ ದ.ಕ.ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇದೀಗ ಆರಂಭಗೊಂಡಿದೆ. ಕೋವಿಡ್ ಸೋಂಕಿನ ಎರಡನೇ ಅಲೆಯ ಭೀತಿಯ ನಡುವೆಯೇ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಕೇರಳ ರಾಜ್ಯದ ಗಡಿ ಭಾಗದಿಂದ ಮಂಗಳೂರು ಸೇರಿದಂತೆ ಜಿಲ್ಲೆಯೊಳಗೆ ಇಂದಿನಿಂದ ಷರತ್ತು ಬದ್ಧವಾಗಿ ಬಸ್ ಸಂಚಾರ ಆರಂಭಗೊಂಡಿದೆ. ಅಲ್ಲದೇ, ರೈಲು ಸಂಚಾರದ ವ್ಯವಸ್ಥೆಯೂ ಇದ್ದು, ವಿದ್ಯಾರ್ಥಿಗಳಿಗೆ ದ.ಕ.ಜಿಲ್ಲೆಯೊಳಗಿನ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಯಾವುದೇ ತೊಂದರೆಯಿಲ್ಲ. ಆದರೂ ಅವರಿಗೆ ಪ್ರವೇಶ ಪತ್ರದ ಆಧಾರದಲ್ಲಿ ಕೆಎಸ್‍ಆರ್?ಟಿಸಿ, ಖಾಸಗಿ ಬಸ್?ಗಳ ವ್ಯವಸ್ಥೆ ಮಾಡಲಾಗಿದೆ.ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಪರೀಕ್ಷಾ ಸಾಮಗ್ರಿಗಳು, ನೀರಿನ ಬಾಟಲಿಗಳೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುತ್ತಿದ್ದು, ಪೆÇೀಷಕರಿಗೆ ಪರೀಕ್ಷಾ ಕೇಂದ್ರದ ಆವರಣ ಪ್ರವೇಶಿಸಲು ನಿರ್ಬಂಧ ವಿಧಿಸಲಾಗಿದೆ. ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮೊದಲು ಆರೋಗ್ಯ ಇಲಾಖೆ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್, ಸ್ಯಾನಿಟೈಸರ್, ಕಡ್ಡಾಯವಾಗಿ ಮಾಸ್ಕ್ ಧಾರಣೆ ಮಾಡಿಸಿಯೇ ಕಳುಹಿಸುತ್ತಿರುವುದು ಕಂಡು ಬಂತು.ಅಲ್ಲದೇ, ಯಾರೂ ಗುಂಪು ಸೇರದಂತೆ ನಿಗಾ ವಹಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದೊಳಗೆ 12 ಮಂದಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಕೋವಿಡ್ ಸೋಂಕಿತರಿದ್ದಲ್ಲಿ ಅವರಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ

ದಕ್ಷಿಣ ಕನ್ನಡ ಜಿಲ್ಲೆಯ 179 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಬೇಕಾದ ಸಕಲ ಸಿದ್ಧತೆಯನ್ನು ಮಾಡಲಾಗಿದೆ ಎಂದು ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಮಲ್ಲೇಸ್ವಾಮಿ ಹೇಳಿದ್ದಾರೆ.
ಪರೀಕ್ಷೆ ಎದುರಿಸಲು ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಈಗಾಗಲೇ 9 ಮಂದಿ ಕೊರೋನಾ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಿಗೆ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ. ಈ ಬಾರಿ 29351 ರೆಗ್ಯುಲರ್, 694 ಖಾಸಗಿ, 2050 ಶಾಲಾ ಪುನರಾವರ್ತಿತ ಅಭ್ಯರ್ಥಿಗಳು, 538 ಖಾಸಗಿ ಪುನರಾವರ್ತಿತ ಸೇರಿದಂತೆ ಒಟ್ಟು 32626 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ ಎಂದವರು ತಿಳಿಸಿದರು.

 

Related Posts

Leave a Reply

Your email address will not be published.