ಉಡುಪಿಯಲ್ಲಿ ನಾಗರಿಕ ಸಮಿತಿಯಿಂದ ಅನಾಥ ಶವಗಳ ಅಂತ್ಯಸಂಸ್ಕಾರ

ಉಡುಪಿ ; ಉಡುಪಿ ಜಿಲ್ಲಾ ನಾಗರಿಕ ಸಮಿತಿಯವರು, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅನಾಥ ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ಕಾನೂನಿನ ಪ್ರಕ್ರಿಯೆಗಳು ನಡೆದ ಬಳಿಕ, ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ಅವರ, ಸಮಕ್ಷಮದಲ್ಲಿ ನಡೆಸಿದರು.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ, ಅಪರಿಚಿತ ಮಹಿಳೆಯ ಶವ, ಮತ್ತು ನಗರದ ಸಾರ್ವಜನಿಕ ಸ್ಥಳದಲ್ಲಿ ಮೃತಪಟ್ಟಿರುವ ಅಪರಿಚಿತ ಪುರುಷನ ಶವ ಹಾಗೂ ಹೊಸಬೆಳಕು ಅನಾಥಾಶ್ರಮದಲ್ಲಿ ಆಶ್ರಯ ಪಡೆದಿರುವ ವೃದ್ಧರೊರ್ವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಮೂರು ಶವಗಳು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಟ್ಟು, ಮಾಧ್ಯಮ ಪ್ರಕಟಣೆ ನೀಡಲಾಗಿತ್ತು. ಕಾಲಮಿತಿ ಕಳೆದರೂ, ಮೃತರ ವಾರಸುದಾರರು ಸಂಪರ್ಕಿಸದೆ ಇರುವುದರಿಂದ ಕಾನೂನಿನಂತೆ ಅಂತ್ಯಸಂಸ್ಕಾರ ನಡೆಸಲಾಯಿತು.

 

ಶವಗಳ ದಫನ ಕಾರ್ಯದಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸದಸ್ಯರಾದ ತಾರಾನಾಥ್ ಮೇಸ್ತ ಶಿರೂರು, ರಾಮದಾಸ್ ಪಾಲನ್ ಉದ್ಯಾವರ, ಸೋನಿ ಪ್ರದೀಪ್, ಪ್ರದೀಪ್ ಅಜ್ಜರಕಾಡು, ಹೊಸಬೆಳಕು ಆಶ್ರಮ ಸಂಚಾಲಕ ವಿನಯಚಂದ್ರ ಸಾಸ್ತಾನ, ಹಾಗೂ ಸಮಾಜಸೇವಕ ಕ್ರಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರ ಅಭಿಮಾನಿ ಬಳಗದ ಸದಸ್ಯರು ಭಾಗಿಗಳಾಗಿದ್ದರು. ಪ್ಲವರ್ ಸ್ಟಾಲ್ ವಿಷ್ಣು, ಅಣ್ಣಪ್ಪ ಪೂಜಾರಿ ಕರಂಬಳ್ಳಿ, ಸುಶೀಲಾ ರಾವ್ ಉಡುಪಿ, ಹಾಗೂ ನಗರಾಡಳಿತದವರು ಸಹಕರಿಸಿದರು.

Related Posts

Leave a Reply

Your email address will not be published.