ಉಳ್ಳವರು ಸಮಾಜಕ್ಕೆ ಕೊಡುಗೆ ನೀಡಬೇಕು: ಸಚಿವ ಅಂಗಾರ ಅಭಿಮತ

ಕಡಬ: ಆರ್ಥಿಕವಾಗಿ ಶಕ್ತರಾಗಿರುವವರು ಸಮಾಜಕ್ಕೆ ಸಹಾಯವಾಗುವ ರೀತಿಯಲ್ಲಿ ಕೊಡುಗೆ ನೀಡಿ ಸಮಾಜದ ಋಣ ತೀರಿಸಬೇಕು ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.

ಅವರು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಕಾರ್ಡಿಯಾಲಾಜಿ ಎಟ್ ಡೋರ್ ಸ್ಟೆಪ್ಸ್ ಫೌಂಡೇಷನ್ ಟ್ರಸ್ಟ್ , ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಭಾರತೀಯ ಜನೌಷಧಿ ಕೇಂದ್ರ ಇದರ ಸಹಯೋಗದಲ್ಲಿ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯ ಕಾರ್ಡಿಯಾಲಾಜಿ ವಿಭಾಗ ಮುಖ್ಯಸ್ಥ ಡಾ|ಪದ್ಮನಾಭ ಕಾಮತ್ ಕೆ ಅವರು ನೇತೃತ್ವದಲ್ಲಿ ಕಡಬ ತಾಲೂಕಿನ ಐದು ಕೇಂದ್ರಗಳಿಗೆ ಇಸಿಜಿ ಯಂತ್ರಗಳ ವಿತರಣೆ ಹಾಗೂ ಕಡಬ ಸಮುದಾಯ ಆರೋಗ್ಯಕೇಂದ್ರಕ್ಕೆ ಪರೀಕ್ಷಾ ಪರಿಕರಗಳನ್ನು ಹಸ್ತಾಂತರಿಸಿ ಮಾತನಾಡಿದರು.

ಡಾ. ಪದ್ಮನಾಭ ಕಾಮತ್ ಅವರು ಉದಾರ ಕೊಡುಗೆ ನೀಡಿರುವುದು ಗ್ರಾಮೀಣ ಭಾಗದ ಜನತೆಗೆ ವರದನವಾಗಿದೆ, ಉಳ್ಳವರು ಸಮಾಜಕ್ಕೆ ಈ ರೀತಿಯ ಕೊಡುಗೆಗಳನ್ನು ನೀಡುವುದರಿಂದ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ಸಚಿವರು ಅಭಿಪ್ರಾಯ ಪಟ್ಟರು, ಈ ಸಂದರ್ಭದಲ್ಲಿ ಪಿಜಕಳ ಸರಕಾರಿ ಹಿರಿಯ ಪ್ರಾಥಮಿಕ ಕಿರಿಯ ಪ್ರಾಥಮಿಕ ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ತರಬೇತಿ ನೀಡಿ ಶಿಕ್ಷರನ್ನು ಸಚಿವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ತ್ರಿಮೂರ್ತಿ, ಸಿಎಡಿ ಫೌಂಡೇಶನ್‌ನ ಪಿಆರ್‌ಒ ಆಗಿರುವ ಪ್ರದೀಪ್ ನಾಯಕ್, ಕಡಬ ಪ್ರಾ.ಕೃ.ಪ. ಸ. ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.