ಬ್ಯ್ಲಾಕ್ ಫಂಗಸ್ ರೋಗಕ್ಕೆ ಔಷಧ ಮಂಗಳೂರಿಗೆ : ಶಾಸಕ ಡಾ.ವೈ ಭರತ್ ಶೆಟ್ಟಿಯವರ ವಿಶೇಷ ಪ್ರಯತ್ನದ ಫಲ

ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧದ ಕೊರತೆ ಇರುವುದನ್ನು ಮನಗಂಡ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಾಡಿದ ವಿಶೇಷ ಪ್ರಯತ್ನದ ಫಲವಾಗಿ Association of Oral and Maxillofacial Surgeons of India ( AOMSI) ಸಂಘಟನೆಯ ಮಾಜಿ ಅಧ್ಯಕ್ಷರಾದ ಡಾ.ಕೃಷ್ಣಮೂರ್ತಿ ಬೊನತಾಯ ಹಾಗೂ ಡಾ.ಬದ್ರಿ ಅವರು ಯುನೈಟೆಡ್ ಕಿಂಗಡಂನಿಂದ ಬ್ಲ್ಯಾಕ್ ಫಂಗಸ್ ಗೆ ಬೇಕಾಗಿರುವ Amphotericin ಔಷಧವನ್ನು ಭಾರತಕ್ಕೆ ತರಿಸಿದ್ದು ಅದನ್ನು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರಿಗೆ ಮಂಗಳವಾರ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಎಒಎಮ್‌ಎಸ್‌ಐ ಅಧ್ಯಕ್ಷರಾದ ಡಾ.ಮಂಜುನಾಥ ರೈ ಹಾಗೂ ಮಾಜಿ ಅಧ್ಯಕ್ಷರಾದ ಡಾ.ಮುಸ್ತಫಾ ಖಾದರ್ ಉಪಸ್ಥಿತರಿದ್ದರು.ಡಾ.ವೈ ಭರತ್ ಶೆಟ್ಟಿಯವರು ಕೇಂದ್ರ ಹಾಗೂ ರಾಜ್ಯ ಸರಕಾರದೊಂದಿಗೆ ನಿರಂತರ ಸಂವಹನ ನಡೆಸಿದ ಪ್ರಯತ್ನ ಆಡಳಿತಾತ್ಮಕ ಕಾರ್ಯಗಳು ಸುಗಮವಾಗಿ ನಡೆದು ಔಷಧ ಮಂಗಳೂರಿಗೆ ಬರಲು ಸಹಕಾರಿಯಾಯಿತು. ಬ್ಲ್ಯಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆ ನೀಡುವಲ್ಲಿ ಎಒಎಮ್‌ಎಸ್‌ಐನಿಂದ ಸಂಘಟನೆ ಮುಂಚೂಣಿಯಲ್ಲಿದ್ದು, ಕೋವಿಡ್ 19 ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿಯೂ ಸರಕಾರದೊಂದಿಗೆ ಕೈಜೋಡಿಸಿದೆ.

Related Posts

Leave a Reply

Your email address will not be published.