ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ದ.ಕ ಜಿಲ್ಲಾಧಿಕಾರಿ ಭೇಟಿ

ಕೋವಿಡ್ ಭೀತಿ ಮಧ್ಯೆಯೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಂಗಳೂರಿನ ನಂತೂರಿನ ಪದವು ಹಾಗೂ ಕಪಿತಾನಿಯ ಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರು ಭೇಟಿ ನೀಡಿ. ಪರಿಶೀಲನೆ ನಡೆಸಿದರು. ಕೊರೋನ ಮಾರ್ಗಸೂಚಿ ಅನ್ವಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆಯನ್ನು ಬರೆದಿದ್ದಾರೆ. ಜಿಲ್ಲೆಯಲ್ಲಿ 29,351 ರೆಗ್ಯುಲರ್ ವಿದ್ಯಾರ್ಥಿಗಳು, 694 ಖಾಸಗಿ, 2,050 ಶಾಲಾ ಪುನರಾವರ್ತಿತ ಅಭ್ಯರ್ಥಿಗಳು, 538 ಖಾಸಗಿ ಪುನರಾವರ್ತಿತ ಸೇರಿದಂತೆ ಒಟ್ಟು 32,636 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆಯನ್ನು ಬರೆದರು. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಪರೀಕ್ಷಾ ಸಾಮಗ್ರಿಗಳು, ನೀರಿನ ಬಾಟಲಿಗಳೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ರು.Dakshina Kannada DC Dr Rajendra K Vಪೋಷಕರಿಗೆ ಪರೀಕ್ಷಾ ಕೇಂದ್ರದ ಆವರಣ ಪ್ರವೇಶಿಸಲು ನಿರ್ಬಂಧ ವಿಧಿಸಲಾಗಿದೆ. ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮೊದಲು ಆರೋಗ್ಯ ಇಲಾಖೆ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್, ಸ್ಯಾನಿಟೈಸರ್, ಕಡ್ಡಾಯವಾಗಿ ಮಾಸ್ಕ್ ಧಾರಣೆ ಮಾಡಿಸಿಯೇ ಕಳುಹಿಸುತ್ತಿರುವುದು ಕಂಡು ಬಂತು. ಈಗಾಗಲೇ ಒಂಬತ್ತು ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅವರಿಗೆ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಸೂಕ್ತ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಕೇರ್ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸಹಕಾರ ನೀಡಿದ್ದಾರೆ.

 

Related Posts

Leave a Reply

Your email address will not be published.