ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪ ಇಬ್ಬರ ಬಂಧನ

ಮಂಗಳೂರಿನ ಖಾಸಗಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರ ಬಂಧವಾಗಿದ್ದು, ಇತರ ಕೆಲ ಆರೋಪಿಗಳ ಪತ್ತೆಯಾಗಬೇಕಿದೆ. ಈ ನಡುವೆ, ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯಲ್ಲಿ ವೈದ್ಯರಿಂದ ಕಿರಿಕಿರಿ, ತೊಂದರೆ ಆಗಿರುವ ಕುರಿತಂತೆ ದೂರು ನೀಡಲಾಗಿದ್ದು, ಈ ಬಗ್ಗೆಯೂ ಸೂಕ್ತ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಗಂಭೀರ ಅಪರಾಧವಾಗಿರುತ್ತದೆ ಎಂದರು. ಕೊರೋನದಂತಹ ಈ ಸಂದರ್ಭದಲ್ಲಿ ಇಂತಹ ವರ್ತನೆಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಇತ್ತೀಚೆಗೆ ಪಿಡಿಒ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲೂ ನಾಲ್ವರನ್ನು ಬಂಧಿಸಲಾಗಿತ್ತು. ಚಿಕಿತ್ಸೆಯ ಸಂದರ್ಭ ಆಸ್ಪತ್ರೆಗಳಲ್ಲಿ ಕೆಲವೊಮ್ಮೆ ಗೊಂದಲ ಆಗುವುದು ಸಹಜ. ಆ ಸಂದರ್ಭ ಸಂಬಂಧಪಟ್ಟವರಿಗೆ ಈ ಬಗ್ಗೆ ಮಾಹಿತಿ ನೀಡುವುದು ಅಥವಾ ಸ್ಥಳೀಯ ಪೆÇಲೀಸ್ ಠಾಣೆಯ ಮೂಲಕ ಪ್ರಕರಣ ಇತ್ಯರ್ಥಕ್ಕೆ ಪ್ರಯತ್ನಿಸಬೇಕೇ ಹೊರತು, ಈ ರೀತಿ ಹಲ್ಲೆ ನಡೆಸುವುದು ಸರಿಯಲ್ಲ ಎಂದು ಹೇಳಿದರು.

Related Posts

Leave a Reply

Your email address will not be published.