ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ಗೀತ ಗಾಯನ

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ‘ಕನ್ನಡಕ್ಕಾಗಿ ನಾವು’ ಸಮೂಹ ಗಾಯನ ಅಭಿಯಾನ ಕನ್ನಡದ ಶ್ರೇಷ್ಟತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಮೂರು ಗೀತೆಗಳನ್ನು ಹಾಡುವ ಮೂಲಕ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ನಡೆಯಿತು.

ಕಾಪು ತಹಶಿಲ್ದಾರ್‌ಶ್ರೀನಿವಾಸ ಮೂರ್ತಿ ಕುಲಕರ್ಣಿ ತಮಟೆ ಬಡಿಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಆಯೋಜನೆ ಯನ್ನು ಕಾಪು ತಾಲೂಕು ಆಡಳಿತ ವಹಿಸಿದ್ದು, ಕಾರ್ಯಕ್ರಮ ಅಭೂತ ಪೂರ್ವ ಯಸಸ್ಸು ಕಂಡಿದೆ.

ಕಾಪುವಿನ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು, ಆರೋಗ್ಯ ಇಲಾಖಾ ಸಿಬ್ಬಂದಿಗಳು, ಪೋಲಿಸ್ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗೃಹ ರಕ್ಷಕ ದಳ, ಕನ್ನಡ ಸಾಹಿತ್ಯ ಪರಿಷತ್ತು, ಅರಣ್ಯ ಇಲಾಖಾ ಸಿಬ್ಬಂದಿ ಸಹಿತ ವಿವಿಧ ಸಂಘ ಸಂಸ್ಥೆಗಳ ಸಿಬ್ಬಂದಿಗಳು ಅಭಿಯಾನ ಯಶಸ್ಸುಗೊಳಿಸುವಲ್ಲಿ ಸಹಕರಿಸಿದರು.
ಈ ಸಂದರ್ಭ ಕಾಪು ತಹಶಿಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಮಾತನಾಡಿ, ಸರಕಾರದ ಆದೇಶದಂತೆ ಕನ್ನಡದ ಶ್ರೇಷ್ಠತೆಯನ್ನು ಸಾರುವ ಗೀತ ಗಾಯನವನ್ನು ಕಾಪು ಬೀಚ್‌ನಲ್ಲಿ ಅಯೋಜನೆ ಮಾಡಿದ್ದೇವೆ. ಕನ್ನಡ ಭಾಷೆ, ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಕೈ ಜೋಡಿಸೋಣ ಎಂದರು.

ಕಾರ್ಯಕ್ರಮವನ್ನು ನಿರೂಪಿಸಿದ ಗುರು ಚರಣ್ ಮಾತನಾಡಿ, ಕಾಪುವಿನ ಎಲ್ಲಾ ಶಾಲೆಗಳಿಗೆ ತೆರಳಿ ನಾವು ರಿಹರ್ಸಲ್ ಮಾಡಿಸಿದ್ದೆವೆ. ಇದರೊಂದಿಗೆ ಅಟೋ ಚಾಲಕರು ಸಹಿತ ೬೦೦ಕ್ಕಿಂತಲೂ ಹೆಚ್ಚಿನ ಜನರು ಸಮೂಹ ಗಾಯನದಲ್ಲಿ ಭಾಗಿ ಯಾಗಿದ್ದಾರೆ ಎಂದರು.ಈ ಸಂದರ್ಭ ಕಾಪು ಪುರಸಭಾ ಅಧಿಕಾರಿ ವೆಂಕಟೇಶ್ ನಾವಡ, ಉಪ ತಹಶಿಲ್ದಾರ್ ರವಿಶಂಕರ್ ಮತ್ತು ಅಶೋಕ್ ಕೋಟೆಕಾರ್, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ, ಪೋಲಿಸ್ ವೃತ್ತ ನಿರೀಕ್ಷಕ ಪ್ರಕಾಶ್, ಠಾಣಾಧಿಕಾರಿ ರಾಘವೇಂದ್ರ ಸಿ, ಅರಣ್ಯಾಧಿಕಾರಿ ಜೀವನ್‌ದಾಸ್ ಶೆಟ್ಟಿ, ಮಾಜಿ ಪುರಸಭಾಧ್ಯಕ್ಷ ಅನಿಲ್ ಕುಮಾರ್,ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಮತ್ತಿತರರು ಉಪಸ್ತಿತರಿದ್ದರು.

 

Related Posts

Leave a Reply

Your email address will not be published.