ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗ ಕಚೇರಿಯ ದಶಮಾನೋತ್ಸವ

ಪುತ್ತೂರು: ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ದಶಮಾನೋತ್ಸವ ಕಾರ್ಯಕ್ರಮವು ಮುಕ್ರಂಪಾಡಿಯ ವಿಭಾಗೀಯ ಕಚೇರಿಯ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಿವೃತ್ತ ನೌಕರರನ್ನು ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಈ ಭಾಗದಲ್ಲಿ ಉತ್ತರ ಕರ್ನಾಟಕ ಭಾಗದವರೇ ನಿಗಮದಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ತವರು ಜಿಲ್ಲೆಗೆ ವರ್ಗಾಯಿಸಿದರೆ ಇಲ್ಲಿ ಸಿಬ್ಬಂದಿ ಕೊರತೆ ಉಂಟಾಗುತ್ತದೆ. ಇದಕ್ಕಾಗಿ ಕೆಎಸ್‌ಆರ್‌ಟಿಸಿಯಲ್ಲಿ ಆಯಾ ವಿಭಾಗವಾರು ಸ್ಥಳೀಯ ನೇಮಕಾತಿ ಪದ್ದತಿಯನ್ನು ಮರು ಆರಂಭಿಸುವ ಕುರಿತು ಸಾರಿಗೆ ಸಚಿವರಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು.

ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು.ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಕೆ. ಜಯಕರ ಶೆಟ್ಟಿ ವಿಭಾಗ ಸಂಚಲನಾ ಅಧಿಕಾರಿ ಮುರಳೀಧರ ಆಚಾರ್ಯ ಸನ್ಮಾನ ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ೨೫ ಮಂದಿ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ಸಚಿವ ಎಸ್. ಅಂಗಾರ ಮತ್ತು ಪುತ್ತೂರು ವಿಭಾಗೀಯ ಕಚೇರಿ ಪ್ರಾರಂಭವಾಗುವಲ್ಲಿ ಮುತುವರ್ಜಿ ವಹಿಸಿದ್ದ ಶಾಸಕ ಸಂಜೀವ ಮಠಂದೂರುರವರನ್ನು ಕೆಎಸ್‌ಆರ್‌ಟಿಸಿ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಕೆ. ಜಯಕರ ಶೆಟ್ಟಿ ವಿಭಾಗ ಸಂಚಲನಾ ಅಧಿಕಾರಿ ಮುರಳೀಧರ ಆಚಾರ್ಯ, ಕೆಸ್ಸಾರ್ಟಿಸಿ ವಿಭಾಗೀಯ ತಾಂತ್ರಿಕ ಶಿಲ್ಪಿ ಆಶಾಲತಾ, ಉಪಸ್ಥಿತರಿದ್ದರು.

Related Posts

Leave a Reply

Your email address will not be published.