ಕೇರಳ ಗಡಿ ನಿರ್ಬಂಧ ತೆರವಿಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ 19 ಹಿನ್ನೆಲೆಯಲ್ಲಿ ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಜಿಲ್ಲೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಅವರು, ಇದು ಬಹಳ ಸೂಕ್ಷ್ಮವಾಗಿರುವ ವಿಚಾರ. ಸಮಾಜದಲ್ಲಿ ಜವಾಬ್ದಾರಿಯನ್ನು ನಾವೆಲ್ಲ ಹೊರಬೇಕಾಗುತ್ತೆ. ಸಮಾಜದಲ್ಲಿ ಹಲವಾರು ಭಾವನೆಗಳು ಇವೆ.
ಆ ಭಾವನೆಗಳಿಗೆ ದಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು. ಭಾವನೆಗಳಿಗೆ ದಕ್ಕೆಯಾದಾಗ ಕ್ರಿಯೆ ಮತ್ತು ಪ್ರತಿಕ್ರಿಯೆ ಆಗುತ್ತದೆ. ಕಾನೂನು ಸುವ್ಯವಸ್ಥೆ ಜೊತೆ ಸಾಮಾಜಿಕ ಸಾಮರಸ್ಯ ಕಾಪಾಡುವುದು ಸರ್ಕಾರದ ಕರ್ತವ್ಯ. ಯುವಕರು ಸಹ ಸಾಮಾಜಿಕ ಭಾವನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕೋಕೆ ಆಗಲ್ಲ. ನಮ್ಮೆಲ್ಲ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ನಮ್ಮ ನೈತಿಕತೆ ಮೇಲೆ ಇದು ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಅಗುತ್ತೆ. ಇಲ್ಲಿ ಪ್ರತಿಯೊಬ್ಬರದ್ದು ಹೊಣೆಗಾರಿಕೆ ಇದೆ ಎಂದು ಹೇಳಿದರು.

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಅವರು, ಕಳೆದ ವಾರ ಎಂಟು ರೇಖ್ ಕಲ್ಲಿದ್ದಲು ಬರ್ತಿತ್ತು. ಕೇಂದ್ರ ಕಲ್ಲಿದ್ದಲು ಸಚಿವರ ಜೊತೆ ಮಾತನಾಡಿದ್ದೇವೆ.ಇನ್ನು ಮೂರು ರೇಖ್ ಕಲ್ಲಿದ್ದಲು ಬಂದ್ರೆ ಹೆಚ್ಚು ಅನುಕೂಲ ಆಗುತ್ತೆ. ಅದಕ್ಕೆ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

 

Related Posts

Leave a Reply

Your email address will not be published.