ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ವಿ: ಪ್ರಧಾನಿ ಮೋದಿ

ನಮ್ಮ ದೇಶ ಕರ್ತವ್ಯ ಪಾಲಿಸಿದೆ. ದೇಶಾದ್ಯಂತ 100 ಕೋಟಿ ಕೋವಿಡ್-19 ಲಸಿಕೆ ಡೋಸ್ ಮೈಲುಗಲ್ಲು ತಲುಪಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನ ಯಶಸ್ಸು. ಇದರ ಪರಿಣಾಮ ಭಾರತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಯಶಸ್ಸು ಪಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಹೇಳಿದರು.

ದೇಶವನ್ನುದ್ದೇಶಿಸಿ ಮಾತನಾಡಿದ ಅವರು. ದೇಶದಲ್ಲಿ ನೂರು ಕೋಟಿ ಲಸಿಕೆ ನೀಡುವ ಗುರಿ ತಲುಪಿದ್ದೇವೆ. 100 ಕೋಟಿ ಡೋಸ್ ಲಸಿಕೆ ಎಲ್ಲದಕ್ಕೂ ಉತ್ತರ ನೀಡಿದೆ ಎಂದು ತಿಳಿಸಿದರು.ಈ ಹಿಂದೆ ಭಾರತ ಲಸಿಕೆಗಳಿಗಾಗಿ ಬೇರೆ ದೇಶಗಳನ್ನು ಅವಲಂಬಿಸಬೇಕಿತ್ತು. ಆದರೆ ಕೋವಿಡ್ 19 ಸೋಂಕು ಸಂದರ್ಭದಲ್ಲಿ ಭಾರತವೇ ಕೋವಿಡ್ ಲಸಿಕೆ ಕಂಡು ಹಿಡಿದು ಇತರ ದೇಶಗಳಿಗೆ ರಫ್ತು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಭಾರತ ಲಸಿಕೆಗಾಗಿ ಬೇರೆ ದೇಶವನ್ನು ಅವಲಂಬಿಸಿತ್ತು. ಹೀಗಾಗಿ ಕೊರೋನ ವಿರುದ್ಧ ಹೊರಾಟದಲ್ಲಿ ಹಲವು ಪ್ರಶ್ನೆ ಎದ್ದಿತ್ತು. 130 ಕೋಟಿ ಜನರಿಗ ಲಸಿಕೆ ನೀಡುವುದು ಹೇಗೆ ಎನ್ನುವ ಪ್ರಶ್ನೆ ಎದುರಾಗಿದೆ. ದೇಶದ ಪ್ರತಿಯೊಬ್ಬ ವ್ಯಕ್ತಿಗೆ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುತ್ತಿದೆ. ಇಡೀ ವಿಶ್ವ ಭಾರತದ ಸಾಧನೆಯನ್ನು ನೋಡುತ್ತಿದೆ. ನಮ್ಮ ದೇಶ ಕರ್ತ್ಯವವನ್ನು ಪಾಲಿಸಿದೆ. ಕಠಿಣ ಗುರಿ ಇಟ್ಟುಕೊಂಡು ಸಾದಿಸುವುದು ಭಾರತಕ್ಕೆ ಗೊತ್ತಿದೆ.ಲಸಿಕೆ ನೀಡಿಕೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕೊರೋನ ಲಸಿಕೆ ಅಭಿಯಾನದಲ್ಲಿ ಭಾರತ ಏಕತೆ ಕಂಡಿದೆ. ಕಡಿಮೆ ಸಮಯದಲ್ಲಿ 100 ಕೋಟಿ ವ್ಯಾಕ್ಸಿನ್ ಡೋಸ್ ನೀಡಲಾಗಿದೆ ಎಂದರು.

 

Related Posts

Leave a Reply

Your email address will not be published.