ಕೋವಿಡ್ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ವಾರಾಂತ್ಯದಲ್ಲಿ ನಿರ್ಬಂಧ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಬರ್ಂಧಗಳನ್ನು ವಿಧಿಸಿದ ನಂತರವೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗುತ್ತಿದೆ.

ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ನೆರೆಯ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರಿಗೆ ನಿರ್ಬಂಧಗಳನ್ನು ವಿಧಿಸಲಾಗಿರುತ್ತದೆ.

ಪೂಜಾ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದ್ದು, ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ ಎಸ್‍ಒಪಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿರುತ್ತದೆ.ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ವಾರಾಂತ್ಯದಲ್ಲಿ ಆಗಮಿಸುತ್ತಿರುವುದರಿಂದ ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸಲು ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಆಗಸ್ಟ್ 5 ರಿಂದ ಆಗಸ್ಟ್ 15 ರವರೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ದೇವಸ್ಥಾನಗಳು ತೆರೆದಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಅಗತ್ಯ ಕೋವಿದ್ಯೆ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ.

ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಬರ್ಂಧಿಸಲಾಗಿದೆ ಹಾಗೂ ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಎಲ್ಲಾ ರೀತಿಯ ಉತ್ಸವ ಸೇವೆಗಳು, ತೀರ್ಥ ಪ್ರಸಾದ, ಮುಡಿ ಸೇವೆ ವಸತಿಗಳನ್ನು ನಿಬರ್ಂಧಿಸಿ, ಆರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

Related Posts

Leave a Reply

Your email address will not be published.