ಜನದಟ್ಟಣೆ ನಿಯಂತ್ರಿಸಲು ಗಿಲ್ಬರ್ಟ್ ಡಿಸೋಜಾರವರ ಸರಳ ಸೂತ್ರ….!

ಜನದಟ್ಟಣೆ ನಿಯಂತ್ರಣ ಹಾಗೂ ಕೊರೋನಾ ಹರಡುವಿಕೆಯನ್ನು ತಡೆಯುವಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದ್ದು, ಅದನ್ನು ಸರಳ ಸೂತ್ರ ಅನುಸರಿಸುವ ಮೂಲಕ ಪಾಲಿಸಬಹುದು ಎಂಬ ಸರಳ ಸೂತ್ರವೊಂದನ್ನು ಸಾಮಾಜಿಕ ಕಾರ್ಯಕರ್ತ ಗಿಲ್ಬರ್ಟ್ ಡಿಸೋಜಾ ನೇತೃತ್ವದ ತಂಡ ಪ್ರಸ್ತಾಪಿಸಿದೆ. ಕಳೆದ ವರ್ಷ ಹಂಪನಕಟ್ಟೆ, ಕಂಕನಾಡಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮುಚ್ಚುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದ ಗಿಲ್ಬರ್ಟ್ ಡಿಸೋಜಾ ಹಾಗೂ ಅವರ ತಂಡದ ಇಬ್ಬರು ಸದಸ್ಯರು ಇಂದು ಪ್ರೆಸ್‌ಕ್ಲಬ್‌ನಲ್ಲಿ ತಮ್ಮ ಸರಳ ಸೂತ್ರದ ಬಗ್ಗೆ ಮಾಹಿತಿ ನೀಡಿದರು.

ಪ್ರತಿಯೊಬ್ಬರು ಮೊಬೈಲ್ ಸಂಖ್ಯೆಯ ಕೊನೆ ಅಂಕಿಯ ಅನುಸಾರ ನಿಗದಿತ ಅವಧಿಯಲ್ಲಿ ಮಾತ್ರವೇ ಖರೀದಿ ಕಾರ್ಯ ನಡೆಸಿದರೆ ಬಹುತೇಕವಾಗಿ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಗಿಲ್ಬರ್ಟ್ ಡಿಸೋಜಾ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತರಾದ ಅಲೋಶಿಯಸ್ ಅಲ್ಬುಕರ್ಕ್, ಇಲಿಯಾಸ್ ಸಾಂತಿಸ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.