ಕಡಲ್ಕೋರೆತ ತಡೆಗಟ್ಟಲು ಜಿಲ್ಲಾಡಳಿತ ಕಾಳಜಿ ವಹಿಸುತ್ತಿಲ್ಲ : ಯು.ಟಿ.ಖಾದರ್

ಜಿಲ್ಲೆಯಲ್ಲಿ ಕಡಲ್ಕೋರೆತ ತಡೆಗಟ್ಟಲು ಜಿಲ್ಲಾಡಳಿತ ಯಾವುದೇ ರೀತಿಯಲ್ಲೂ ಕಾಳಜಿ ವಹಿಸಿದಂತೆ ತೋರುತ್ತಿಲ್ಲ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು.ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಉಳ್ಳಾಲ, ಸೋಮೇಶ್ವರ್ ಬೀಚ್ ನಲ್ಲಿ ರಸ್ತೆಗಳು ಸಮುದ್ರ ಪಾಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋಟ್ಯಾಂತರ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಎಲ್ಲಾವೂ ಸಮುದ್ರ ಪಾಲಾಗುತ್ತಿದೆ. ಶಾಶ್ವತ ಪರಿಹಾರದ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.

Related Posts

Leave a Reply

Your email address will not be published.