ತೆಂಕನಿಡಿಯೂರು ಕಾಲೇಜು : ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 75ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಧ್ವಜಾರೋಹಣ ಗೈದರು. ಅವರು ಮಾತನಾಡಿ ಸಂವಿಧಾನದ ಆಶಯಗಳಾದ ಸಮಾನತೆ, ಸಹೋದರತೆ, ಸ್ವಾತಂತ್ರ್ಯಗಳನ್ನು ಅರ್ಥಮಾಡಿಕೊಂಡು ಅನುಸರಿಸಬೇಕು ಹಾಗೂ ನಾಗರಿಕರ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸಬೇಕು. ಮಾನವ ಸಂಪನ್ಮೂಲ ಅಭಿವೃದ್ಧಿಯ ಕಡೆಗೆ ಅಗತ್ಯವಾಗಿ ಗಮನ ನೀಡಬೇಕು. ಕೋವಿಡ್ ಸಂಕಷ್ಟದ ಸಮಯದಲ್ಲಿ ದೇಶದ ಹಿತಾಸಕ್ತಿಗಾಗಿ ಪ್ರತಿಯೊಬ್ಬರು ದುಡಿಯುವುದು ನಿಜವಾದ ದೇಶ ಸೇವೆ. ಸ್ವಾತಂತ್ರ್ಯಕ್ಕಾಗಿ ತ್ಯಾಗಮಾಡಿದ ಮಹಾತ್ಮರನ್ನು ಈ ಸಂದರ್ಭದಲ್ಲಿ ಸ್ಮರಿಸಿದರು. ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಕಾಲೇಜಿನಲ್ಲಿ 75 ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಸುರೇಶ್ ರೈ ಕೆ., ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರಧ್ಯುಮ್ನ, ರೋವರ್ಸ್-ರೇಂಜರ್ಸ್ ವಿದ್ಯಾರ್ಥಿಗಳು, ಕಾಲೇಜಿನ ಬೋಧಕ/ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕರಾದ ಪ್ರೊ. ರಾಧಾಕೃಷ್ಣ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಡಾ. ದುಗ್ಗಪ್ಪ ಕಜೆಕಾರ್ ವಂದಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಮಚಂದ್ರ ಪಾಟ್ಕರ್ ಕಾರ್ಯಕ್ರಮ ಸಂಘಟಿಸಿದರು.

 

Related Posts

Leave a Reply

Your email address will not be published.