ಪುತ್ತೂರು : ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿರಗಳ ದ್ವಂಸ ಖಂಡಿಸಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ಪುತ್ತೂರು; ಸರ್ವ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ದಕ್ಕೆಯನ್ನುಂಟುಮಾಡಿ ಕತ್ತಲ್ಲಿರುವ ಸರಕಾರಕ್ಕೆ ಬೆಳಕು ತೋರಿಸುವ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಆಗ್ರಹ ನಗರದ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಹಿಂದುತ್ವದ ಆಧಾರದಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ಸರಕಾರ ದೇವಸ್ಥಾನಗಳನ್ನು ಕೆಡವುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದು, ಈಗ ಎಲ್ಲಿ ಹೋಗಿದೆ ಇವರ ಹಿಂದುತ್ವ ಎಂದು ಪ್ರಶ್ನಿಸಿದರು. ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಜನರನ್ನು ಮೋಸಗೊಳಿಸಿ, ಅಧಿಕಾರಿಗಳನ್ನು ಬಲಿಪಶು ಮಾಡುತ್ತಿದೆ. ಬಿಜೆಪಿ ಸರಕಾರಕ್ಕೆ ಆಡಳಿತ ನಡೆಸುವ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ಮಾತನಾಡಿ, ಹಿಂದುತ್ವದ ಅಜೆಂಡಾದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ನಂಜನಗೂಡಿನಲ್ಲಿ ದೇವಸ್ಥಾನಗಳನ್ನು ಒಡೆದು ಘಟನೆಯನ್ನು ಅಧಿಕಾರಿಗಳ ತೆಲೆಗೆ ಕಟ್ಟಲು ಹೊರಟಿದೆ. ಆದರೆ ಕಾಂಗ್ರೆಸ್ ಯಾವತ್ತೂ ಕಪಟ ಹಿಂದುತ್ವ ಮಾಡಿಲ್ಲ. ಹಿಂದುತ್ವಕ್ಕೆ ರಾಜಕೀಯಕ್ಕೆ ಬಳಸಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿ ಸರಕಾರದ ನಿಲುವೇನು ಎಂದು ಪ್ರಶ್ನಿಸಿದರು.

ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮಾನಾಥ್ ಶೆಟ್ಟಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ,ನಗರ ಸಭಾ ಮಾಜಿ ಸದಸ್ಯರಾದ ಅನ್ವರ್ ಖಾಸಿಂ,ರವಿಪ್ರಸಾದ್ ಶೆಟ್ಟಿ ಬನ್ನೂರು, ಜಗದೀಶ್ ಕಜೆ,ಮುಖೇಶ್ ಕೆಮ್ಮಿಂಜೆ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ಪುರಸಭಾ ಮಾಜಿ ಅಧ್ಯಕ್ಷೆ ವಾಣಿ ಶ್ರೀಧರ್ ಮತ್ತಿತರರು ಪಾಲ್ಗೊಂಡಿದ್ದರು.

 

Related Posts

Leave a Reply

Your email address will not be published.