ದ.ಕ. ಜಿಲ್ಲಾಡಳಿತದಿಂದ ಅಶಕ್ತರಿಗೆ ಉಚಿತ ಲಸಿಕೆ: ಸಂಚಾರಿ ಲಸಿಕಾ ವಾಹನಕ್ಕೆ ಚಾಲನೆ

ದ.ಕ. ಜಿಲ್ಲಾಡಳಿತ, ಇಂಡಿಯನ್ ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕ, ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ವಾಹನದ ಮೂಲಕ ಅಶಕ್ತರಿಗೆ ಲಸಿಕೆ ನೀಡುವ ಸಂಚಾರಿ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು.

ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಸಂಚಾರಿ ಲಸಿಕಾ ವಾಹನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ದರ ಹೆಚ್ಚಳವಾಗಿಲ್ಲ. ಬದಲಾಗಿ ಒಂದು ವಾರದಿಂದೀಚೆಗೆ ಈ ದರದಲ್ಲಿ ಏರಿಳಿತ ಕಂಡುಬರುತ್ತಿದೆ. ಅದಕ್ಕಿಂತಲೂ ಮುಖ್ಯವಾಗಿ ಹಿಂದೆಲ್ಲಾ ದಿನಕ್ಕೆ ಗರಿಷ್ಠ 3ರಿಂದ ನಾಲ್ಕು ಸಾವಿರದಷ್ಟಿದ್ದ ಕೊರೋನ ತಪಾಸಣೆ ಪ್ರಮಾಣ ಇದೀಗ ಹೆಚ್ಚಾಗಿದೆ ಎಂದು ಹೇಳಿದರು.


ಬ್ಯಾಂಕ್ ಆಫ್ ಬರೋಡಾದ ಡಿಜಿಎಂ ಗಾಯತ್ರಿ ಮಾತನಾಡಿ, ಜಿಲ್ಲಾಡಳಿತ ರೆಡ್‌ಕ್ರಾಸ್, ರೋಟರಿ ಕ್ಲಬ್‌ಗಳ ಸಹಯೋಗದೊಂದಿಗೆ ಬ್ಯಾಂಕ್ ಕೂಡಾ ಅಶಕ್ತರಿಗೆ ಮನೆ ಬಳಿ ತೆರಳಿ ಲಸಿಕೆ ನೀಡುವ ಕಾರ್ಯದಲ್ಲಿ ಭಾಗಿಯಾಗುತ್ತಿರುವ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ ಬಗ್ಗೆ ಸಂಜೆ ಒಳಗೆ ನಿರ್ಧಾರವಾಗುತ್ತದೆ ಎಂದು ಹೇಳಿದರು.

ಈ ಸಂದಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಡಾ. ವೈ ಭರತ್ ಶೆಟ್ಟಿ, ಕಾರ್ಯಕ್ರಮದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಛೇರ್ಮನ್ ಸಿ ಎ ಶಾಂತಾರಾಮ್ ಶೆಟ್ಟಿ ,ಗೌರವ ಕಾರ್ಯದರ್ಶಿ ಪ್ರಭಾಕರ್ ಶರ್ಮಾ,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ,ಏಶಿಯನ್ ಪತ್ರಕರ್ತರ ಒಕ್ಕೂಟದ ಸಂಚಾಲಕ ಮದನ ಗೌಡ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ,ಬ್ಯಾಂಕ್ ಆ ಬರೋಡ ಮಹಾ ಪ್ರಭಂಧಕಿ ಗಾಯತ್ರಿ ಆರ್ ,ರೋಟರಿ ಕ್ಲಬ್ ಅಧ್ಯಕ್ಷ ಆರ್ಚಿಬಾಲ್ಡ್ ಮೆನೆಜ್ಸ್ ,ಯತೀಶ್ ಬೈಕಂಪಾಡಿ ,ನಿತ್ಯಾನಂದ ಶೆಟ್ಟಿ ,ತುಷಾರ್ ಸುರತ್ಕಲ್ಮತ್ತಿತರರು ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.