ಪ್ರವಾದಿ ನಿಂದನೆಯನ್ನು ವಿರೋಧಿಸಿ ಪ್ರತಿಭಟನೆ

ಗುರುಪುರ ಕೈಕಂಬ; ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲಾಗುತ್ತಿರುವ ನಿರಂತರ ದೌರ್ಜನ್ಯದ ವಿರುದ್ಧ ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯದಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಎಂ. ಇಸ್ಹಾಕ್ ಕೌಸರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ನಿಮಗಿಂತಲೂ ಪ್ರವಾದಿಯನ್ನು ನಿಂದಿಸಿದ ಜನರು ಕಳೆದುಹೋಗಿದ್ದಾರೆ. ಅವರಲ್ಲಿ ಬಹಳಷ್ಟು ಜನರು ಪ್ರವಾದಿಯವರನ್ನು ಅರಿತಾಗ ಇಸ್ಲಾಂ ಸ್ವೀಕರಿಸಿದ ಚರಿತ್ರೆಯಿದೆ. ಪ್ರವಾದಿಯನ್ನು ನಿಂದಿಸುವ ಕಾರಣವಾದರೂ ಏನು? ಅವರು ಹಿಂಸೆಗೆ ಪ್ರೇರಣೆ ನೀಡಿದರೇ ಎಂದು ಪ್ರಶ್ನಿಸಿದ್ದರು. ಪ್ರವಾದಿಯ ಸಂದೇಶ ಇಂದಿಗೂ ಪ್ರಸ್ತುತವಾಗಿದೆ. ನೀವು ಅನಾಥರನ್ನು ಸಂರಕ್ಷಿಸಿರಿ. ಅನಾಥರನ್ನು ಸಂರಕ್ಷಿಸುವವರಿಗೆ ಸ್ವರ್ಗವಿದೆ.ನೀವು ಗುಲಾಮರನ್ನು ಸ್ವತಂತ್ರರಾಗಿಸಿ ಅದರಲ್ಲಿ ಪುಣ್ಯವಿದೆ ಎಂದು ಹೇಳಿದರು.

ಪ್ರತಿಭಟನೆಯನ್ನು ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ಅಧ್ಯಕ್ಷರಾದ ಜಮಾಲುದ್ದೀನ್ ದಾರಿಮಿ, ಗುರುಪುರ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮಿನ್ ಕಾರ್ಯದರ್ಶಿ ಸಿರಾಜುದ್ದೀನ್ ದಾರಿಮಿ, ಹಾಗೂ ಸ್ಥಳೀಯ ಜಮಾತ್ ಖತೀಬರುಗಳು, ಅಧ್ಯಾಪಕರು, ಗುರುಪುರ ರೇಂಜ್ ಮದರಸ ಮ್ಯಾನೇಜ್ಮೆಂಟ್ ಪದಾಧಿಕಾರಿಗಳು ಹಾಗೂ ಕೈಕಂಬ ವಲಯ ಎಸ್‌ಕೆಎಸ್‌ಎಸ್‌ಎಫ್ ಕಾರ್ಯಕರ್ತರು, ಎಸ್‌ಕೆಎಸ್‌ಎಸ್‌ಎಫ್ ಅಧೀನ ಸಂಸ್ಥೆಯ ನಾಯಕರು, ವಲಯ ಪ್ರಧಾನ ಕಾರ್ಯದರ್ಶಿ ಆರೀಫ್ ಬಡಕಬೈಲ್ ಭಾಗವಹಿಸಿದ್ದರು.’

 

Related Posts

Leave a Reply

Your email address will not be published.