ಬೆಳೆ ಸಮೀಕ್ಷೆ ವಿನೂತನ ಕೃಷಿ ಆ್ಯಪ್ ಬಿಡುಗಡೆಗೊಳಿಸಿದ ಡಾ.ಭರತ್ ಶೆಟ್ಟಿ ವೈ

ಸುರತ್ಕಲ್: ರೈತರಿಗೆ ಮಾಹಿತಿ ನೀಡುವ ಸಲುವಾಗಿ, ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು.

ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ ಬಗ್ಗೆ ಈ ಆಪ್‍ನಲ್ಲಿ ಹಾಕಿ ಮಾಹಿತಿ ನೀಡಿದರೆ ಆರ್ಟಿಸಿಯಲ್ಲಿ ದಖಲೀಕರಣಗೊಂಡು ಅನಿರೀಕ್ಷಿತವಾಗಿ ಮಳೆ ಹಾನಿ ಸಂಭವಿಸಿದಲ್ಲಿ ಪರಿಹಾರ, ಸಾಲ ಸೌಲಭ್ಯ ಮತ್ತಿತರ ಪ್ರಯೋಜನಪಡೆಯಬಹುದಾಗಿದೆ. ವಿವಿಧ ಇಲಾಖೆಗಳ ಅಡಿಯಲ್ಲಿ ಈ ಆ್ಯಪ್ ನಲ್ಲಿಇರುವ ಮಾಹಿತಿ ರವಾನೆಯಾಗಿ ದಾಖಲೆಯಾಗಿ ಇದನ್ನು ಬಳಸಿಕೊಳ್ಳಲಾಗುತ್ತದೆ ಎಂದರು. ರೈತರು ಸ್ವಯಂ ಆಗಿ ಇದನ್ನು ಉಪಯೋಗಿಸಿಕೊಂಡು ಸೌಲಭ್ಯ ಪಡೆಯಬಹುದು ಎಂದರು. ಉಪಮೇಯರ್ ಸುಮಂಗಳ ರಾವ್, ರಣ್‍ದೀಪ್ ಕಾಂಚನ್, ಕೃಷಿ ಅಧಿಕಾರಿ ಬಷೀರ್ ಅಹ್ಮದ್, ಬಿಜೆಪಿ ಸ್ಥಳೀಯ ಮುಖಂಡರಾದ ಶಿತೇಶ್ ಕೊಂಡೆ,ಶಾನ್ವಾಜ್ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.