ಭರದ ಸಿದ್ಧತೆಯಲ್ಲಿ ಸಾಂಪ್ರದಾಯಿಕ ಮಂಗಳೂರು ದಸರಾ

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವರಾತ್ರಿ ಉತ್ಸವ ಮತ್ತು ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 7ರಿಂದ 16ರತನಕ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಕುದ್ರೋಳಿ ಕ್ಷೇತ್ರದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ.

ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ರಾಜ್ಯದಲ್ಲಿ ಸ್ಥಾಪಿತ ಏಕೈಕ ಕ್ಷೇತ್ರ ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥ ದೇವಸ್ಥಾನ. ಶ್ರೀ ಕ್ಷೇತ್ರದ ನವೀಕರಣ ರೂವಾರಿ ಬಿ. ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಹಾಗೂ ಮಾರ್ಗದರ್ಶನದಲ್ಲಿ ಕಳೆದ ಹಲವಾರು ವರ್ಷಗಳಿಂದ ಸತತವಾಗಿ ವೈಭವಪೂರ್ಣವಾಗಿ ದಸರಾ ಕಾರ್ಯಕ್ರಮ ನಡೆಯುತ್ತಿದ್ದು, ಕಳೆದ ಹಾಗೂ ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗ ಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕೆ ಪೂರಕವಾಗಿ ಸಿದ್ಧತೆಗಳು ನಡೆಯುತ್ತಿದೆ. ಇನ್ನು ಈ ಬಾರಿಯ ಮಹೋತ್ಸವವೂ ಯಶಸ್ವಿಯಾಗಿ ನಡೆಯಬೇಕಾದರೆ ಸಂಘಸಂಸ್ಥೆಗಳು, ಭಕ್ತಾದಿಗಳು ಸರ್ವರ ಸಹಕಾರ ಪ್ರಮುಖವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ನಗರದ ರಾಜಬೀದಿಗಳು ವಿದ್ಯುದ್ದೀಪಗಳಿಂದ ಕಂಗೊಳಿಸಲಿವೆಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಆಶಯದಂತೆ ಮಂಗಳೂರ ದಸರಾ ಮಹೋತ್ಸವ ನಡೆಯಲಿದ್ದು, ಇದು ಯಶಸ್ವಿಯಾಗಿ ನಡೆಯಬೇಕಾದರೆ ಎಲ್ಲ ಸಂಘ-ಸಂಸ್ಥೆಗಳು, ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ

ಕಳೆದ ಬಾರಿಯೂ `ನಮ್ಮ ದಸರಾ-ನಮ್ಮ ಸುರಕ್ಷೆ’ ಚಿಂತನೆಯೊಂದಿಗೆ ಯಶಸ್ವಿಯಾಗಿ ನಡೆಸಲಾಗಿದೆ. ದಸರಾ ಮಹೋತ್ಸವದ ದರ್ಬಾರು ಮಂಟಪ, ಮೂರ್ತಿ ರಚನೆ ಕಾರ್ಯ ನಡೆಯುತ್ತಿದೆ. ಕಳೆದ ಬಾರಿಯೂ ಮಂಗಳೂರು ದಸರಾ ಮಹೋತ್ಸವ ಮೂಲಕ ಕರಾವಳಿಯ ಆರ್ಥಿಕ ಚೈತನ್ಯಕ್ಕೆ ಪುನಶ್ಚೇತನ ಸಿಕ್ಕಂತಾಗಿದೆ. ಇದಕ್ಕೆ ಗೋಕರ್ಣನಾಥ, ಶಾರದೆ, ನವದುರ್ಗೆಯರ ಅನುಗ್ರಹ ಕಾರಣ. ಎಲ್ಲರ ಸಹಕಾರದೊಂದಿಗೆ ಈ ಬಾರಿಯೂ ಉತ್ಸವ ಯಶಸ್ವಿಯಾಗಿ ನಡೆಸಲು ಎಲ್ಲಾ ಸಿದ್ಧತೆಯನ್ನ ನಡೆಸಲಾಗಿದೆ.

ಇನ್ನು 10 ದಿನಗಳ ಕಾಲ ನಡೆಯಲಿರುವ ಮಂಗಳೂರು ದಸರಾಕ್ಕೆ ಕ್ಷೇತ್ರದ ಗೋಕರ್ಣನಾಥ ಕಲ್ಯಾಣಮಂಟಪದಲ್ಲಿ ಕಲಾತ್ಮಕವಾಗಿ ವಿನ್ಯಾಸಗೊಳಿಸಲಾಗಿರುವ ವಿಶೇಷ ಮಂಟಪದಲ್ಲಿ ನವದುರ್ಗೇಯರು ಹಾಗೂ ಶಾರದಾ ಮಾತೆಯ ಮೂರ್ತಿಗಳನ್ನ ಸಂಪ್ರದಾಯಿಕ ಹಾಗೂ ವಿಧಿ ಪೂರ್ಣವಾಗಿ ಪ್ರತಿಷ್ಠಾಪಿಸಲಾಗುತ್ತದೆ. ಇನ್ನು ಕ್ಷೇತ್ರದಲ್ಲಿ ಭರದಸಿದ್ಧತೆ ನಡೆಯುತ್ತಿದ್ದು, ಸರ್ಕಾರ ಕೋವಿಡ್ -19ರ ಮಾರ್ಗಸೂಚಿಯನ್ನ ಕಟ್ಟುನಿಟ್ಟಿನೊಂದಿಗೆ ಈ ಬಾರಿ ದಸರಾ ನಡೆಯಲಿದೆ.

Related Posts

Leave a Reply

Your email address will not be published.