ಮಂಗಳೂರಿನಲ್ಲಿ ಏಕಕಾಲದಲ್ಲಿ ಬೃಹತ್ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ

ಮಂಗಳೂರು: ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಅಹಿಂಸೆಯ ಜೊತೆ ಜೊತೆಗೆ ಸ್ವಚ್ಛತೆ ಹಾಗೂ ನೈರ್ಮಲೀಕರಣಕ್ಕೆ ಅತೀ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದರು. ಸ್ವಚ್ಛತೆ -ನೈರ್ಮಲೀಕರಣ ಒಂದು ಅಭಿಯಾನವಾಗಿ ದೇಶದಾದ್ಯಂತ ಜನರಲ್ಲಿ ಅರಿವು ಮೂಡಿಸುವುದು ಹಾಗೂ ಸ್ವಚ್ಛತಾ ಕ್ರಮಗಳನ್ನು ದೈನಂದಿನ ಜೀವನದಲ್ಲಿ ಅನುಸರಿಸುವುದು ಅವಶ್ಯಕವಾಗಿದೆ.
ಆದ ಕಾರಣ ಅ. 2ರ ಗಾಂಧೀ ಜಯಂತಿಯ ಪ್ರಯುಕ್ತ ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ಅದರಂತೆ ಅ.2ರಂದು ಮಂಗಳೂರು ನಗರದ ಕದ್ರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸ್ವಚ್ಚತಾ ಅಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಚಾಲನೆ ನೀಡಿ ಬಳಿಕ ಮಾತನಾಡಿದ ಅವರು. ರಾಜ್ಯದಾದ್ಯಂತ ಏಕಕಾಲದಲ್ಲಿ ಬೃಹತ್ ಸ್ವಚ್ಚತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. 6229 ವಸತಿ ಶಾಲೆ,ವಸತಿ ನಿಲಯದ ವಿದ್ಯಾಸಂಸ್ಥೆ ,3,42,200 ವಿದ್ಯಾರ್ಥಿಗಳು, 42೦೦೦ ಸಿಬ್ಬಂದಿಗಳು ರಾಜ್ಯಾದ್ಯಂತ ಈ ಆಂದೋಲನದಲ್ಲಿ ಪಾಲುಗೊಳ್ಳಲಿದ್ದಾರೆ ಎಂಬುದಾಗಿ ತಿಳಿಸಿದರು.

Related Posts

Leave a Reply

Your email address will not be published.