ಮಂಗಳೂರಿನಲ್ಲಿ ಪ್ರಸ್ತಾವಿತ ಸೈಕಲ್ ಪಥ ಅವೈಜ್ಞಾನಿಕ : ಎ.ಸಿ. ವಿನಯರಾಜ್ 

ಬೆಂಗಳೂರು ಮಾದರಿಯಲ್ಲಿ ಮಂಗಳೂರಿನಲ್ಲಿ ಸೈಕಲ್ ಪಥ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಮಂಗಳೂರಿನಲ್ಲಿ ಪ್ರಸ್ತಾವಿತ ಸೈಕಲ್ ಪಥವು ಅವೈಜ್ಞಾನಿಕವಾಗಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಮಂಗಳೂರು ಮಹಾ ನಗರ ಪಾಲಿಕೆಯ ವಿಪಕ್ಷ ನಾಯಕ ಎ.ಸಿ. ವಿನಯರಾಜ್ ಎಚ್ಚರಿಸಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನಲ್ಲಿ ಎರಡು ಹಂತದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಸೈಕಲ್ ಪಥವು ಅವೈಜ್ಞಾನಿಕವಾಗಿದೆ. ಪ್ರಸ್ತಾವಿತ ಮಾರ್ಗಗಳಲ್ಲಿ 3 ಮೀ. ಅಗಲದ ಸುಮಾರು12 ಕಿ.ಮೀ. ಉದ್ದರ ಸೈಕಲ್ ಪಥ ನಿರ್ಮಿಸಲು ಸ್ಥಳಾವಕಾಶವೇ ಇಲ್ಲ. ಆದಾಗ್ಯೂ ಸೈಕಲ್ ಪಥ ಮಾಡಲು ಮನಪಾ ಹೊರಟಿದೆ. ಇದಕ್ಕೆ ಶಾಸಕ ವೇದವ್ಯಾಸ ಕಾಮತ್‌ರ ಹಠಮಾರಿ ಧೋರಣೆಯೇ ಕಾರಣ ಎಂದು ಆಪಾದಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್‌ಗಳಾದ ಮಹಾಬಲ ಮಾರ್ಲ, ಜೆಸಿಂತಾ ವಿಜಯಾ ಆಲ್ಫ್ರೆಡ್, ಕಾರ್ಪೊರೇಟರ್ ಅನಿಲ್ ಕುಮಾರ್ ಪೂಜಾರಿ, ಸ್ಟಾನಿ ಆಲ್ವಾರೀಸ್, ಹೊನ್ನಯ್ಯ, ಶಂಸುದ್ದೀನ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.