ಮಂಗಳೂರಿನಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ

ಮಂಗಳೂರು: ಮಂಗಳೂರು ಕಮಿಷನರೇಟ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ 354 ಕೆಜಿ ಮಾದಕ ದ್ರವ್ಯ ವಸ್ತುಗಳನ್ನು ಮುಲ್ಕಿ ಕೊಲನಾಡ್ ಜಂಕ್ಷನ್ ಸಮೀಪದ ಬಯೋ ಮೆಡಿಕಲ್ ವೇಸ್ಟ್ ಟ್ರೀಟ್‌ಮೆಂಟ್ ರೂಮ್‌ನಲ್ಲಿ ಶನಿವಾರ ನಾಶಪಡಿಸಲಾಯಿತು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಮಾದಕ ವಸ್ತು ವಿರೋಧಿ ದಿನದ ಪ್ರಯುಕ್ತ ನಡೆಸಿದ ಕಾರ್ಯಾಚರಣೆ ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು ಎಂದು ತಿಳಿಸಿದರು.


50 ಪ್ರಕರಣಗಲ್ಲಿ 130ಕ್ಕೂ ಹೆಚ್ಚು ಕೆ.ಜಿ. ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದರಲ್ಲಿ ಗಾಂಜಾ ಪ್ರಮಾಣವೇ ಅಧಿಕವಿದೆ. ಇದರಲ್ಲಿ ಎಲ್‌ಎಸ್‌ಡಿ, ಎಂಡಿಎಂಎ, ಕೊಕೈನ್, ಬ್ರೌನ್ ಶುಗರ್ ಒಳಗೊಂಡಿದೆ ಎಂದರು.

ದ.ಕ. ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಣೆ ಮಾತನಾಡಿ, ಎಸ್ಪಿ ವ್ಯಾಪ್ತಿಯಲ್ಲಿ 224 ಕೆ.ಜಿ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ 214 ಪ್ರಕರಣ ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿ ಭಾಸ್ಕರ್ ವಿ.ಬಿ., ಬಂಟ್ವಾಳ ಡಿವೈಎಸ್ಪಿ ವ್ಯಾಲಂಟೈನ್ ಡಿಸೋಜ, ಡಿಸಿಆರ್‌ಬಿ ಡಿವೈಎಸ್ಪಿ ದಿನಕರ ಶೆಟ್ಟಿ, ಪುತ್ತೂರು ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಬಯೋ ಮೆಡಿಕಲ್ ವೇಸ್ಟ್ ಟ್ರೀಟ್‌ಮೆಂಟ್ ರೂಮ್‌ನ ಇನ್‌ಚಾರ್ಜ್ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.