ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆಗೆ ಎಸಿಬಿ ದಾಳಿ || KS Linge gowda

ಬೆಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯುಟಿವ್ ಇಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೆ.ಎಸ್ ಲಿಂಗೇಗೌಡ, ಮಂಡ್ಯ ಹೆಚ್.ಎಲ್.ಬಿ.ಸಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀನಿವಾಸ್ ಕೆ, ದೊಡ್ಡಬಳ್ಳಾಪುರ ರೆವಿನ್ಯೂ ಇನ್ಸ್’ಪೆಕ್ಟರ್ ಲಕ್ಷ್ಮಿಕಾಂತಯ್ಯ, ವಾಸುದೇವ್ ಸೇರಿದಂತೆ 15 ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉರ್ವದಲ್ಲಿರುವ ಲಿಂಗೇ ಗೌಡ ಮನೆಗೆ ಇಂದು ಬೆಳಗ್ಗೆ ದಾಳಿ ಮಾಡಿದ ಏಳು ಮಂದಿ ಎಸಿಬಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹಲವು ವರ್ಷಗಳಿಂದ ಮಂಗಳೂರಿನಲ್ಲೇ ಬೇರೆ ಬೇರೆ ಹುದ್ದೆಯಲ್ಲಿ ಮುಂದುವರಿದಿರುವ ಲಿಂಗೇಗೌಡರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಈ ಹಿಂದೆಯೂ ಲಿಂಗೇಗೌಡರ ಮನೆ ಮೇಲೆ ಎಸಿಬಿ ದಾಳಿಯಾಗಿತ್ತು.ರಾಜ್ಯ ಸರಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ನಿಕಟವರ್ತಿಗಳ ಮನೆಗಳ ಮೇಲೆ ಇಂದು ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಏಕಕಾಲಕ್ಕೆ ದಾಳಿ ನಡೆಸಿದೆ.

Related Posts

Leave a Reply

Your email address will not be published.