ಯುವ ಸಮೂಹಕ್ಕೆ ಉದ್ಯೋಗ ಒದಗಿಸಿ: ನೂತನ ಮುಖ್ಯಮಂತ್ರಿಗೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹ

ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರೀ ಸಂಕಷ್ಟದಲ್ಲಿರುವ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದ್ಯತೆ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹಿಸಿದೆ.


ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್ ರಕ್ಷಾ ರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಯಾದವ್ , ಕಾರ್ಯದರ್ಶಿಗಳಾದ ಸುರಭಿ ದ್ವಿವೇದಿ, ವಿದ್ಯಾ ಬಾಲಕೃಷ್ಣ , ಸುಮಯ್ಯ ತಬ್ರೇಜ್ ಮತ್ತಿತರರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯಗಳ ವಿರುದ್ಧ ಹೋರಾಟ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಭೆ ಕುರಿತು ಮಾಹಿತಿ ನೀಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಯುವ ಸಮೂಹ ಭಾರೀ ನಿರೀಕ್ಷೆ ಹೊಂದಿದೆ. ಎಲ್ಲಾ ವರ್ಗದವರು ಹಿಂದೆಂದೂ ಇಲ್ಲದಷ್ಟು ಸಮಸ್ಯೆಗಳಲ್ಲಿ ಸಿಲುಕಿದ್ದಾರೆ. ಕೋವಿಡ್ ನಿಂದಾಗಿ ಸಾಕಷ್ಟು ಕೈಗಾರಿಕೆ, ವ್ಯಾಪಾರ ವಹಿವಾಟು ಮುಚ್ಚಿದ್ದು, ಜನ ಭಾರೀ ಪ್ರಮಾಣದಲ್ಲಿ ಉದ್ಯೋಗ ಕಳೆದುಕೊಂಡಿದ್ದಾರೆ. ಯುವ ಸಮೂಹಕ್ಕೆ ಉದ್ಯೋಗ ಕಲ್ಪಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದ್ದಾರೆ. ಆಗಸ್ಟ್ 5 ಕ್ಕೆ ಸಂಸತ್ ಘೇರಾವ್: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಯುವ ಕಾಂಗ್ರೆಸ್ ನಿಂದ ಸಂಸತ್ ಘೇರಾವ್ ಹಾಕಲು ತೀರ್ಮಾನಿಸಲಾಗಿದೆ. ಕಾರ್ಯಕಾರಣಿಯಲ್ಲಿ ಈ ಸಂಬಂಧ ಚರ್ಚೆ ನಡೆಸಿದ್ದು, ಯುವ ಕಾಂಗ್ರೆಸ್ ತಂಡ ದೆಹಲಿಯಲ್ಲೂ ತನ್ನ ಹೋರಾಟ ಮುಂದುವರೆಸಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ತೀರ್ಮಾನಗಳ ವಿರುದ್ಧ ಹೋರಾಟ ತೀವ್ರಗೊಳಿಸಲು ಸಹ ನಿರ್ಧರಿಸಲಾಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯಹೇಳಿದ್ದಾರೆ.

ಈ ವೇಳೆ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ., ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಯಾದವ್ , ಕಾರ್ಯದರ್ಶಿಗಳಾದ ಸುರಭಿ ದ್ವಿವೇದಿ , ವಿದ್ಯಾ ಬಾಲಕೃಷ್ಣ , ಸುಮಯ್ಯ ತಬ್ರೇಜ್ ಮತ್ತಿತರರು ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.