ವೆನ್ಲಾಕ್ ಆಸ್ಪತ್ರೆಯಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ

ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು.

ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿ.ಎಂ ಕೇರ್ ನಿಧಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 16 ಆಕ್ಸಿಜನ್ ಉತ್ಪಾದನಾ ಘಟಕ ಕಾರ್ಯ ನಿರ್ವಹಿಸಲಿದೆ.ಕೋವಿಡ್ ಒಂದು ಮತ್ತು ಎರಡನೆ ಅಲೆಯ ಸಂದರ್ಭದಲ್ಲಿ ದ.ಕ ಜಿಲ್ಲೆಯಲ್ಲಿ ಕೇವಲ ಒಂದು ಆಕ್ಸಿಜನ್ ಘಟಕದ ಮೂಲಕ ಮಾತ್ರ ಆಕ್ಸಿಜನ್ ಉತ್ಪಾದನೆ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ಬಳ್ಳಾರಿ ಯಿಂದ ಹಾಗೂ ಇತರ ರಾಜ್ಯಗಳಿಂದ ಜಿಲ್ಲೆಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಇದೀಗ ಜಿಲ್ಲೆಯ ವೆನ್ಲಾಕ್, ಲೇಡಿಗೋಶನ್ ಸೇರಿದಂತೆ ಜಿಲ್ಲಾ ಆಸ್ಪತ್ರೆ, ತಾಲೂಕು ಮತ್ತು ಹೋಬಳಿ ಕೇಂದ್ರಗಳು ಸೇರಿದಂತೆ 16ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಪಿ.ಎಂ.ಕೇರ್ ನಿಧಿ ಸೇರಿದಂತೆ ಕ್ರೆಡಾಯ್, ಎಂಆರ್ ಪಿಎಲ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಬ್ಯಾಂಕ್ ಗಳು ಸೇರಿದಂತೆ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ಈ ಎಲ್ಲಾ ಘಟಕಗಳು ಕಾರ್ಯ ನಿರ್ವಹಿಸಲಿದೆ. ಇದರಿಂದ ಮುಂದಿನ ಹಂತದಲ್ಲಿ ಜಿಲ್ಲೆಗೆ ಆಕ್ಸಿಜನ್ ಕೊರತೆಯ ಸಮಸ್ಯೆ ಎದುರಾಗುವ ಸಾಧ್ಯತೆ ಕಡಿಮೆ. ಇದರೊಂದಿಗೆ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಖಾಸಗಿ ಆಸ್ಪತ್ರೆಗಿಂತಲೂ ಹೆಚ್ಚು ಸುಸಜ್ಜಿತ ಆಸ್ಪತ್ರೆಯಾಗಿ ಕಾರ್ಯ ನಿರ್ವಹಿಸಲು ಅನುಕೂಲವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕ ಡಾ.ಸದಾಶಿವ ಶ್ಯಾನ್ ಬೋಗ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.