ಸಕಲೇಶಪುರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಆರ್. ಅಶೋಕ್, ಗೋಪಾಲಯ್ಯ ಭೇಟಿ, ಪರಿಶೀಲನೆ

ಹಾಸನ: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಹಾಸನ ಸಕಲೇಶಪುರದಲ್ಲಿ ಅಪಾರ ಹಾನಿ ಸಂಭವಿಸಿದ್ದು, ಇಂದು ಕಂದಾಯ ಸಚಿವ ಆರ್ ಆಶೋಕ್ ಮತ್ತು ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಭೇಟಿ ನೀಡಿ ಅತಿವೃಷ್ಠಿ ಪ್ರದೇಶವನ್ನು ಪರಿಶೀಲಿಸಿದರು.

ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್ 75 ರಲ್ಲಿ ಆಗಿರುವ ಭೂ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಆದಷ್ಟು ಶೀಘ್ರವಾಗಿ ರಸ್ತೆ ದುರಸ್ತಿ ಪಡಿಸುವಂತೆ ಸೂಚಿಸಿದರು. ಅತೀವೃಷ್ಠಿ ಪ್ರದೇಶವನ್ನು ಪರಿಶೀಲಿಸಿದ ಬಳಿಕ ಸಚಿವರು ಸಾರ್ವಜನಿಕರ ಅಹವಾಲು ಆಲಿಸಿದರು.ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ, ಶಾಸಕರಾದ ಹೆಚ್.ಕೆ ಕುಮಾರಸ್ವಾಮಿ ಅವರು ಸಹ ಸ್ಥಳಕ್ಕೆ ಭೇಟಿ ನೀಡಿ ತುತ್ತಾಗಿ ದುರಸ್ತಿ ಕಾಮಾಗಾರಿ ನಡೆಸಿ ಆದಷ್ಟು ಬೇಗ ಸಂಚಾರ ಮುಕ್ತರನ್ನಾಗಿಸುವಂತೆ ಸೂಚನೆ ನೀಡಿದರು. ಕಾಮಗಾರಿ ಮಾಡುವ ಸಂದರ್ಭದಲ್ಲಿಯೇ ಮುಂಜಾಗ್ರತೆ ವಹಿಸಿಬೇಕಿತು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೂಡ ಆದಷ್ಟು ಶೀಘ್ರವಾಗಿ ಪೂರ್ಣ ಗೊಳಿಸುವಂತೆ ಸೂಚಿಸಿದರು. ಇದೇ ವೇಳೆ ಸಚಿವರು ಸಕಲೇಶಪುರ ಪಟ್ಟಣದ ಅಜಾದ್ ನಗರದಲ್ಲಿ ಮಳೆ ನೀರಿನಿಂದ ಹಾನಿಗೊಳಗಾಗುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. ಸಕಲೇಶಪುರ ಕುರುಡಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳ ಮಾಲೀಕರಿಗೆ ಕಂದಾಯ ಸಚಿವರಾದ ಆರ್ ಅಶೋಕ್ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಪರಿಹಾರ ಧನದ ಚೆಕ್ ವಿತರಿಸಿದರು.

 

Related Posts

Leave a Reply

Your email address will not be published.