HomeFresh Newsಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ಮಂಗಳೂರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಸ್ಪರ್ಧಿಸುತ್ತಿದ್ದು, ಇಂದು ಅವರು ಚುನಾವಣಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಾಮಪತ್ರ ಸಲ್ಲಿಸಿದರು

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಭಂಡಾರಿ, ವಿದ್ಯಾರ್ಥಿ ಜೀವನದಿಂದಲೇ ನಾನು ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದೇನೆ. ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಹಿರಿಯ ನಾಯಕರು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.ಇದೇ ವೇಳೆ ಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಮೊಯ್ದೀನ್ ಬಾವಾ, ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments