HomeFresh Newsಕಾಪುವಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಾಪುವಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಇಂಧನ ಬೆಲೆ ಏರಿಕೆಯ ವಿರುದ್ಧ ಕಾಪು ಪೆಟ್ರೋಲ್ ಬಂಕ್‌ನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ವಿಭಿನ್ನವಾಗಿ ನಡೆದ ಪ್ರತಿಭಟನೆಯಲ್ಲಿ ಕ್ರಿಕೆಟ್ ಆಟಗಾರನ ಮಾದರಿ, ಕೇಕ್ ತುಂಡರಿಸುವುದು, ಮಹಿಳಾ ಕಾಂಗ್ರೆಸ್‌ನಿಂದ ತಟ್ಟೆ ಬಡೆಯುವ ಮೂಲಕ ಎಲ್ಲರ ಗಮನ ಸೆಳೆದರು.


ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕೊವೀಡ್ ಸಂಕಷ್ಟ ಕಾಲದಲ್ಲಿ ಜನರ ಪರವಾಗಿ ನಿಲ್ಲಬೇಕಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಾಯದ ಮೇಲೆ ಬರೆ ಎಳೆಯುತ್ತಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಏರಿಸುವ ಮೂಲಕ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುವಂತ್ತಾಗಿ ಜನ ಸಾಮಾನ್ಯರು ಸಂಕಷ್ಟ ಅನುಭವಿಸುವಂತ್ತಾಗಿದೆ. ಇದು ಕೇವಲ ಕಾಂಗ್ರೆಸ್ ಒಂದು ಪಕ್ಷಕ್ಕೆ ಸೀಮಿತವಾದ ಪ್ರತಿಭಟನೆಯಲ್ಲ ಎಲ್ಲಾ ಜನ ಸಾಮಾನ್ಯರ ಪರವಾದ ಪ್ರತಿಭಟನೆಯಾಗಿದೆ ಎಂದರು.

ಈ ಸಂದರ್ಭ ನವೀನ್ ಸುವರ್ಣ ಅಡ್ವೆ, ನವೀನ್ ಚಂದ್ರ ಜೆ. ಶೆಟ್ಟಿ, ಅಶೋಕ್ ಕುಮಾರ್ ಕೊಡವೂರು, ಗೀತಾ ವಾಗ್ಳೆ, ರಮೀಜ್ ಹುಸೇನ್, ವೈ. ಸುಧೀರ್ ಕುಮಾರ್, ಸುದೀರ್ ಕರ್ಕೇರ ಮುಂತಾದವರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments