HomeFresh Newsಖಾಸಗಿ ಬಸ್ ಪ್ರಯಾಣ ದರ ಏರಿಕೆ ತಡೆ ಹಿಡಿಯಿರಿ: ಜಾತ್ಯಾತೀತ ಮತ್ತು ಸಮಾನ ಮನಸ್ಕ ಸಂಘಟನೆಗಳಿಂದ...

ಖಾಸಗಿ ಬಸ್ ಪ್ರಯಾಣ ದರ ಏರಿಕೆ ತಡೆ ಹಿಡಿಯಿರಿ: ಜಾತ್ಯಾತೀತ ಮತ್ತು ಸಮಾನ ಮನಸ್ಕ ಸಂಘಟನೆಗಳಿಂದ ಆಗ್ರಹ

ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದಕ.ಜಿಲ್ಲೆಯ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು.

ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು ಏರಿಸಿದ್ದು ಸರ್ವಥಾ ಸರಿಯಲ್ಲ. ಕೊರೋನಾ ಸಂಕಷ್ಟದ ಕಾಲಘಟ್ಟದಲ್ಲಿ ಜಿಲ್ಲೆಯ ಲಕ್ಷಾಂತರ ಜನತೆ ಉದ್ಯೋಗವಿಲ್ಲದೆ ಆರ್ಥಿಕ ಸಮಸ್ಯೆಯಿಂದ ತೀವ್ರವಾಗಿ ಕಂಗೆಟ್ಟಿರುವಾಗ ಜಿಲ್ಲಾಧಿಕಾರಿ ಗಳು ಕೇವಲ ನೂರಾರು ಸಂಖ್ಯೆಯಲ್ಲಿರುವ ಬಸ್ ಮಾಲಕರ ನೋವಿಗೆ ಸ್ಪಂದಿಸುವ ನೆಪದಲ್ಲಿ ಸಾರಿಗೆ ಪ್ರಾಧಿಕಾರದ ನಿಯಮಗಳನ್ನು ಉಲ್ಲಂಘಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಸರ್ವ ರಾಜಕೀಯ ಪಕ್ಷಗಳು,ಕೂಡಲೇ ಏರಿಸಿದ ದರವನ್ನು ತಡೆ ಹಿಡಿದು,ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆದು ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ಒಕ್ಕೊರಲಿನಿಂದ ಒತ್ತಾಯಿಸಲಾಯಿತು .

ನಿಯೋಗದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಸದಾಶಿವ ಉಳ್ಳಾಲ್,ಶಶಿಧರ್ ಹೆಗ್ಡೆ, ನೀರಜ್ ಪಾಲ್,CPIM ನಾಯಕರಾದ ವಸಂತ ಆಚಾರಿ, ಸುನಿಲ್ ಕುಮಾರ್ ಬಜಾಲ್, CPI ಮುಖಂಡರಾದ ಕರುಣಾಕರ್,ಜಗತ್ಪಾಲ್, ಜಾತ್ಯಾತೀತ ಜನತಾದಳದ ಮುಖಂಡರಾದ ಸುಮತಿ ಎಸ್ ಹೆಗ್ಡೆ,ಅಲ್ತಾಫ್ ತುಂಬೆ,DYFI ನಾಯಕರಾದ ಮುನೀರ್ ಕಾಟಿಪಳ್ಳ,ಸಂತೋಷ್ ಬಜಾಲ್,ದಲಿತ ಸಂಘಟನೆಗಳ ನಾಯಕರಾದ ಎಂ.ದೇವದಾಸ್, ರಘು ಎಕ್ಕಾರು,ತಿಮ್ಮಯ್ಯ ಕೊಂಚಾಡಿ ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments