HomeFresh Newsಗೋಳಿತೊಟ್ಟು: ಟೆಂಪೋ, ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಸವಾರ ಮೃತ್ಯು

ಗೋಳಿತೊಟ್ಟು: ಟೆಂಪೋ, ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಸವಾರ ಮೃತ್ಯು

ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಅತೀ ವೇಗದಿಂದ ಬಂದ ಟೆಂಪೋವೊಂದು ದ್ವಿಚಕ್ರ ಸವಾರನಿಗೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಾಯಗೊಂಡ ಘಟನೆ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.

ಮಂಗಳೂರಿನ ಕುಂಟಲ್ಪಾಡಿಪದವು ನಿವಾಸಿ ಸಚಿನ್ (29) ಮೃತ ದ್ವಿಚಕ್ರ ಸವಾರ. ಈತನೊಂದಿಗೆ ಪ್ರಯಾಣಿಸುತ್ತಿದ್ದ ಬೆಳ್ತಂಗಡಿಯ ಅಂಕೀತ್ ಗಾಯಗೊಂಡಿದ್ದು, ಈತನನ್ನು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುತ್ತಿದ್ದ ಮೀನು ಸಾಗಾಟದ ಟೆಂಪೋವೊಂದನ್ನು ಚಾಲಕ ಅತೀ ವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿದ್ದು, ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಟೆಂಪೋವು ಸಣ್ಣಂಪಾಡಿ ಎಂಬಲ್ಲಿ ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ದ್ವಿಚಕ್ರ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಸಚಿನ್ ಎಂಬಾತನ ತಲೆಯ ಮೇಲೆ ಟೆಂಪೋದ ಚಕ್ರಗಳು ಹರಿದಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಳಿಕ ಟೆಂಪೋವು ಹೆದ್ದಾರಿ ಬದಿಯ ತೋಡಿಗೆ ಇಳಿದಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments