HomeFresh Newsಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹ : ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹ : ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. Protest by campus front studentsಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು, ಶಾಸಕರ ನಿರ್ಲಕ್ಷ್ಯವಾಗಿದ್ದು, ಪ್ರತಿಯೊಂದು ಸಂಘಟನೆಯ ನಾಯಕರು ಈ ಹೋರಾಟಕ್ಕೆ ಕೈಜೋಡಿಸಬೇಕಾಗಿದೆ.” ಎಂದು ಪ್ರತಿಭಟನಾ ನಿತರರು ಆಕ್ರೋಶ ವ್ಯಕ್ತಪಡಿಸಿದ್ರು. Protest by campus front studentsಈ ವೇಳೆ ಕ್ಯಾಂಪಸ್ ಫ್ರಂಟ್ ರಾಜ್ಯ ಕೋಶಾಧಿಕಾರಿಯಾದ ಸವಾದ್ ಕಲ್ಲರ್ಪೆ, ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಪಟ್ಟಾಭಿರಾಮ ಸೋಮಯಾಜಿ , ಎಸ್.ಡಿ.ಪಿ.ಐ ದ.ಕ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದಾತ್ , ಕ್ಯಾಂಪಸ್ ಪ್ರಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸಿರಾಜ್ ಸುರತ್ಕಲ್, ಜಿಲ್ಲಾ ಮುಖಂಡರಾದ ಶರ್ಫುಧ್ಧೀನ್ ಬಜ್ಪೆ,ಅನ್ಸಾರ್ ಪುತ್ತೂರು, ಯಾಸೀನ್ ಬೆಳ್ತಂಗಡಿ, ಫಯಾಝ್ ವಿಟ್ಲ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments