ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಬಿಗಿ: ಇಬ್ಬರ ಬಂಧನ

ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವ ಮಂಗಳೂರು ಪೊಲೀಸರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಮನ್ ಪ್ರಜೆ ಹಾಗೂ ಹಿಮಾಚಲ ಪ್ರದೇಶದ ಯುವಕನೊಬ್ಬನನ್ನು ಡ್ರಗ್ಸ್‌ನೊಂದಿಗೆ ಬಂಧಿಸಿದ್ದಾರೆ.

ಬಂಧಿತ ಒಮನ್ ಪ್ರಜೆ ಅಹ್ಮದ್ ಮುಸಬಾ ಅಲ್ ಮಹಾಮಾನಿ (34) ಹಾಗೂ ಹಿಮಾಚಲ ಪ್ರದೇಶದ ರಾಮ್ (22) ಎಂದು ಗುರುತಿಸಲಾಗಿದೆ. ಈ ಮಧ್ಯೆ ನಗರದ ಹೊಟೇಲೊಂದರಲ್ಲಿ ಹಿಮಾಚಲ ಪ್ರದೇಶದ ರಾಮ್ ಜತೆ ಬಂಧಿಸಲಾಗಿದ್ದು, ಬಂಧಿತರಿಂದ ಎಂಡಿಎಂಎ ಹಾಗೂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಎನ್‌ಡಿಪಿಎಸ್ ಕಾಯ್ದೆ ಹಾಗೂ ಒಮನ್ ಪ್ರಜೆಯ ಪಾಸ್‌ಪೋರ್ಟ್ ಅವಧಿಯು ಮುಗಿದು ಈತ ಅಕ್ರಮವಾಗಿ ನೆಲೆಸಿದ್ದರಿಂದ ಆ ನೆಲೆಯಲ್ಲಿಯೂ ಈತನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತರಿಂದ 51 ಗ್ರಾಂ ಗಾಂಜಾ ಹಾಗೂ 2 ಗ್ರಾಂನಷ್ಟು ಎಂಡಿಎಂಎ ಪತ್ತೆಯಾಗಿದೆ. ಬಂಧಿತ ಆರೋಪಿಗಳಿಗೆ ಗಾಂಜಾ ಹಾಗೂ ಎಂಡಿಎಂಎ ಹೇಗೆ ಬಂತು ಹಾಗೂ ಗೋವಾದಿಂದ ಡ್ರಗ್ಸ್ ತಂದು ಇಲ್ಲಿ ಸ್ಥಳೀಯವಾಗಿ ಮಾರಾಟ ಮಾಡುತ್ತಿದಾರೆಯೇ ಎಂಬ ಕುರಿತಂತೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

 

 

Related Posts

Leave a Reply

Your email address will not be published.