HomeFresh Newsಅರಕಲಗೂಡು: ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಮೃತದೇಹ ಅರಣ್ಯ ಪ್ರದೇಶದಲ್ಲಿ ಪತ್ತೆ

ಅರಕಲಗೂಡು: ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಮೃತದೇಹ ಅರಣ್ಯ ಪ್ರದೇಶದಲ್ಲಿ ಪತ್ತೆ

ಅರಕಲಗೂಡು:  ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಮೃತದೇಹವನ್ನು ತಾಲೂಕಿನ ಮಲ್ಲಾಪುರ ಬಳಿ ಲಕ್ಕೂರು ಅರಣ್ಯ ಪ್ರದೇಶದಲ್ಲಿ ಎಸೆದಿರುವ ಘಟನೆ ನಡೆದಿದೆ.

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಜಗದೀಶ್ ಕೊಲೆಗೀಡಾದ ವ್ಯಕ್ತಿಯಾಗಿದ್ದಾನೆ,ಮೃತದೇಹದ ಪಕ್ಕದಲ್ಲಿ ಆಟೋ ನಿಲ್ಲಿಸಲಾಗಿದೆ. ಅರಣ್ಯ ಪ್ರದೇಶದಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಕೊಣನೂರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ದುಷ್ಕರ್ಮಿಗಳು ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಆಟೋದಲ್ಲಿ ಶವ ತಂದು ಬಿಸಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬುಧವಾರ ಸಂಜೆ ಆಟೋ ಬಾಡಿಗೆಗೆ ತೆರಳಿದ್ದರು ಎಂದು ಮೃತನ ಪತ್ನಿ ಆರತಿ ಮಾಹಿತಿ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡು ಪೊಲೀಸರು ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments