HomeFresh Newsತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾಂಗ್ರೆಸ್‌ ನಿಂದ ಪ್ರತಿಭಟನೆ

ತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾಂಗ್ರೆಸ್‌ ನಿಂದ ಪ್ರತಿಭಟನೆ

ಇಂಧನ ತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಕಾರ್ಕಳದ ಸ್ಥಳೀಯ ಪೆಟ್ರೋಲ್ ಬಂಕ್ ಎದುರುಗಡೆ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಮಾತನಾಡಿ, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರಕಾರದಿಂದ ಜನ ವಿರೋಧಿ ನೀತಿಯಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತವಾಗಿ ಏರಿಸಿ ಶತಕವನ್ನು ದಾಟಿಸಿದ್ದಾರೆ. ಇದು ಬಿಜೆಪಿ ಸರಕಾರದ ಸಾಧನೆಯ ವಿಷಯವಾಗಿದೆ. ಮೊದಲೇ ಕೊರೊನಾದಿಂದ ಕಂಗೆಟ್ಟ ಮಧ್ಯಮ ಹಾಗೂ ಬಡವರ ಬದುಕಿನ ಮೇಲೆ ಬರೆ ಎಳೆದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಪೂಜಾರಿ, ಪ್ರಭಾಕರ ಬಂಗೇರ ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ದೇವಾಡಿಗ, ಯೋಗೀಶ್ ಕೋಟ್ಯಾನ್, ಸೇವಾದಳ ಅಧ್ಯಕ್ಷ ಸುಶಾಂತ್, ನಗರ ಕಾಂಗ್ರೆಸ್ ಅಧ್ಯಕ್ಷ ಮಧುರಾಜ್ ಶೆಟ್ಟಿ, ಸುಭೀತ್ ಟಿ. ರ್. ನವೀನ್ ದೇವಾಡಿಗ, ಪ್ರತಿಮಾ, ಸೋಮನಾಥ್, ರಹಮತ್, ಕಿಸಾನ್ ಘಟಕದ ಅಧ್ಯಕ್ಷ ಉದಯ ಶೆಟ್ಟಿ, ಹಾಗೂ ವಿವೇಕಾನಂದ ಶೇನೋಯ್ ಮುಂತಾದವರು ಪ್ರತಿಭಟನೆ ಭಾಗವಹಿಸಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments