HomeFresh Newsತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ: ಆರೋಪಿ ಸಹಿತ ಗಾಂಜಾ ವಶಕ್ಕೆ

ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ: ಆರೋಪಿ ಸಹಿತ ಗಾಂಜಾ ವಶಕ್ಕೆ

ಕುಂದಾಪುರ ತಾಲೂಕು ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಎಸ್.ಪಿ. ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿ ಸಹಿತ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಎಸ್.ಪಿ ಮಾರ್ಗದರ್ಶನದಲ್ಲಿ ಡಿಎಸ್ಪಿ, ಸಿಪಿಐ ಸಂತೋಷ್ ಕಾಯ್ಕಿಣಿ, ಪ್ರೊಬೆಷನರಿ ಪಿಎಸ್‌ಐ ವಿನಯ್ ಕುಮಾರ್ ಮತ್ತು ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕರಾದ ನಂಜಾನಾಯ್ಕ್ ಎನ್, ನೇತ್ರತ್ವದಲ್ಲಿ ಅಪಾದಿತರಾದ ನಿಶಾನ್ ಮತ್ತು ಪ್ರಥಮ್ ಕುಮಾರ್ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ತ್ರಾಸಿ ಪ್ರವಾಸಿ ಮಂದಿರದ ಬಳಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ಮಾರಾಟ ಮಾಡುತ್ತಿದ್ದ ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ಮೋಹನ್ , ಚಂದ್ರಶೇಖರ್, ಪ್ರಿನ್ಸ್, ಶ್ರೀಧರ್ ಹಾಗೂ ದಿನೇಶ್ ಭಾಗವಹಿಸಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments