HomeFresh Newsದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರದ ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್...

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರದ ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಐವನ್ ಡಿಸೋಜಾ, ಮಾಜಿ ಶಾಸಕಿ ಶಕುಂತಾಳಾ ಶೆಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಆಸ್ಕರ್ ಫೆರ್ನಾಂಡಿಸ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು, ಆಸ್ಕರ್ ಫೆರ್ನಾಂಡಿಸ್ ಅವರ ಒಡನಾಟ ಮತ್ತು 1971ರಿಂದ ಆಸ್ಕರ್ ಫೆರ್ನಾಂಡಿಸ್ ಅವರು ಕಾಂಗ್ರೆಸ್ ಪಕ್ಷವನ್ನು ಕಟ್ಟುವಲ್ಲಿ ಕಾರಣಿಭೂತರಾಗಿದ್ದರು ಎಂದು ಮೆಲುಕು ಹಾಕಿರದರು.

ಆನಂತರ ಮಾಜಿ ಎಂಎಲ್‍ಸಿ ಐವನ್ ಡಿಸೋಜಾ ಅವರು ಮಾತನಾಡಿ, ಆಸ್ಕರ್ ಫೆರ್ನಾಂಡಿಸ್ ಅವರು ದೀರ್ಘಕಾಲ ಸಂಸದರಾಗಿ ಕಾರ್ಯನಿರ್ವಹಿಸಿದ್ದು, ಸಮಾಜದ ಅಭಿವೃದ್ಧಿಗೆ ಶ್ರಮಿಸಿದವರಲ್ಲಿ ಒಬ್ಬರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವಿಶ್ವಾಸ್ ಕುಮಾರ್ ದಾಸ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್, ಮಹಿಳಾ ಕಾಂಗ್ರೆಸ್‍ನ ಶಾಲೆಟ್ ಪಿಂಟೋ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments