HomeFresh Newsದಸರಾ ಪಾರ್ಟಿ ಮಾಡುವಾಗ ಯುವಕರ ನಡುವೆ ಕಲಹ

ದಸರಾ ಪಾರ್ಟಿ ಮಾಡುವಾಗ ಯುವಕರ ನಡುವೆ ಕಲಹ

ನಗರದ ಪಂಪ್‌ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ.

ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್‌ವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೈಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್ ಎಂಬವರು ತೆರಳಿದ್ದಾರೆ. ರಾತ್ರಿ 2 ಗಂಟೆಯ ಸುಮಾರಿಗೆ ಜೈಸನ್ ಸುರತ್ಕಲ್ ಮತ್ತು ಧನುಷ್ ಎಂಬವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೈಸನ್ ತನ್ನಲ್ಲಿರುವ ಹರಿತವಾದ ಆಯುಧದಿಂದ ಧನುಷ್ ಗೆ ಚುಚ್ಚಿರುವ ವೀಡಿಯೋ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ಘಟನೆಯಿಂದ ತೀವ್ರವಾಗಿ ಗಾಯಗೊಂಡ ಧನುಷ್‌ನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಯ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments