HomeFresh Newsದ.ಕ. ಜಿಲ್ಲೆಯಲ್ಲಿ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿ ತೆರೆಯಲು ಅವಕಾಶ: ಸಚಿವ ಕೋಟ

ದ.ಕ. ಜಿಲ್ಲೆಯಲ್ಲಿ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿ ತೆರೆಯಲು ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಚಿವರು, ಜೂನ್ 23ರಿಂದ ಜವಳಿ, ಝೆರಾಕ್ಸ್ , ಚಪ್ಪಲಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಕಾರಣ ನಾಳೆಯಿಂದ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ ಇರುವ ಕಾರಣ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ತಗ್ಗಿಸಲು ಕ್ರಮ ವಹಿಸಬೇಕೆಂದೂ ಮುಖ್ಯಮಂತ್ರಿ ಸೂಚನೆ ನೀಡಿದ್ದು, ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments