HomeFresh Newsನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಆಂಡ್ ರನ್ ಪ್ರಕರಣ : ವಿದ್ಯಾರ್ಥಿ ಸ್ಥಳದಲ್ಲೇ ಸಾವು

ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಆಂಡ್ ರನ್ ಪ್ರಕರಣ : ವಿದ್ಯಾರ್ಥಿ ಸ್ಥಳದಲ್ಲೇ ಸಾವು

ನಗರದ ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂಬಾತ ಸಾವನ್ನಪ್ಪಿದ ಯುವಕ.ಈತ ನಂತೂರಿನಿಂದ ಪಂಪ್ವೆಲ್ ನತ್ತ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದಾಗ ಯಾವುದೋ ವಾಹನ ಹಿಂದಿನಿಂದ ಡಿಕ್ಕಿಯಾಗಿ ಪರಾರಿಯಾಗಿದೆ. ಆನಂತರ, ಇತರೇ ವಾಹನದವರು ಟ್ರಾಫಿಕ್ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಡಿಕ್ಕಿಯಾಗಿ ಪರಾರಿಯಾದ ವಾಹನದ ಪತ್ತೆಗೆ ಮುಂದಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments