HomeFresh Newsನಗರದ ಪ್ರೆಸ್‍ಕ್ಲಬ್‍ನಲ್ಲಿ ಕೋವಿಡ್ 19 ಲಸಿಕಾ ಅಭಿಯಾನ

ನಗರದ ಪ್ರೆಸ್‍ಕ್ಲಬ್‍ನಲ್ಲಿ ಕೋವಿಡ್ 19 ಲಸಿಕಾ ಅಭಿಯಾನ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಕೋವಿಡ್ 19 ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ ಅವರು ಉದ್ಘಾಟಿಸಿದ್ರು.ತದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದ್ರು.

ಕೆಐಒಸಿಎಲ್‍ನ ಸಿ.ಎಂ.ಡಿ ಟಿ .ಸಾಮಿನಾಥನ್, ಮಹಾ ಪ್ರಭಂದಕ ರಾಮಕೃಷ್ಣ ರಾವ್, ಹಿರಿಯ ಅಧಿಕಾರಿಗಳಾದ ಮುರಳೀಧರ , ಮುರುಗೇಶ್ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,ಪದಾಧಿಕಾರಿಗಳಾದ ಪುಷ್ಪರಾಜ್ ಬಿ ಎನ್,ಭಾಸ್ಕರ್ ರೈ ಕಟ್ಟ,ಸುರೇಶ್ ಪಳ್ಳಿ ಉಪಸ್ಥಿತರಿದ್ದರು .
ಬಳಿಕ ಜಿಲ್ಲಾಧಿಕಾರಿಯವರು ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು .ವೈದ್ಯರಿಂದ ಮಾಹಿತಿ ಪಡೆದುಕೊಂಡರು .

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments