HomeFresh Newsನಾಪತ್ತೆಯಾಗಿದ್ದ ಲೆಕ್ಕಪರಿಶೋಧಕ ಬಾವಿಯಲ್ಲಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕ ಬಾವಿಯಲ್ಲಿ ಶವವಾಗಿ ಪತ್ತೆ

ಉಡುಪಿ: ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ, ಲೆಕ್ಕಪರಿಶೋಧಕನ ಶವವು, ಮನೆಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ಅಗ್ನಿಶಾಮಕ ದಳದ ಸಹಾಯದಿಂದ ಕಳೇಬರವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಹೇಳಲಾಗುತ್ತಿದೆ.

ಕಳೇಬರವನ್ನು ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ನೆರವಾದರು. ಮಣಿಪಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಜಶೇಖರ್ ಹೊಂದಾಳಿ ಘಟನಾ ಸ್ಥಳದಲ್ಲಿದ್ದ ಕಾನೂನು ಪ್ರಕ್ರಿಯೆ ನಡೆಸಿದರು. ಮೃತ ವ್ಯಕ್ತಿ ಸತೀಶ್ ಕುಮಾರ್, (54 ) ತಂದೆ ಶೇಖರ, ಕರಂಬಳ್ಳಿ ವಿ.ಎಮ್ ನಗರದ ನಿವಾಸಿ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments